Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಬೂದಿ ಮುಚ್ಚಿದ ಕೆಂಡ | BJP
    Viral

    ಬಿಜೆಪಿ ಭಿನ್ನಮತ ಬೂದಿ ಮುಚ್ಚಿದ ಕೆಂಡ | BJP

    vartha chakraBy vartha chakraಮಾರ್ಚ್ 27, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.27- ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯಧಿಕ ಸ್ಥಾನ ಇದೆಲ್ಲ ಬೇಕೆಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ (BJP) ಭಿನ್ನಮತದ ಧಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
    ಹೈಕಮಾಂಡ್ ಸೂಚನೆಯ ಮೇರೆಗೆ ಬಂಡಾಯ ಶಮನದ ಅಖಾಡಕ್ಕೆ ಧುಮುಕಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಹೊರತುಪಡಿಸಿ ಉಳಿದ ಕಡೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಸಾರಿರುವ ನಾಯಕರ ಜೊತೆ ಮಾತುಕತೆ ನಡೆಸಿದರು.

    ಯಡಿಯೂರಪ್ಪ ಅವರು ನಡೆಸಿದ ಸಂದಾನದ ಪರಿಣಾಮವಾಗಿ ತುಮಕೂರು ದಾವಣಗೆರೆ ಬೆಳಗಾವಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಬಂಡಾಯ ಶಮನಗೊಂಡಿದೆ ಎಂಬಂತೆ ಕಾಣುತ್ತಿದೆಯಾದರೂ ಅದು ಬೂದಿ ಮುಚ್ಚಿದ ಕೆಂಡದಂತಿದ್ದು ಯಾವುದೇ ಸಮಯದಲ್ಲೂ ಧಗಧಗಿಸಬಹುದಾಗಿದೆ.
    ತುಮಕೂರು ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದರು .ಯಡಿಯೂರಪ್ಪ ಅವರು ನೀಡಿದ ಸಲಹೆಗೆ ಸಮ್ಮತಿಸಿದ ಮಾಧುಸ್ವಾಮಿ ಬಂಡಾಯದ ಬಾವುಟ ಇಳಿಸಿದರಾದರು ಚುನಾವಣೆಯಲ್ಲಿ ಸೋಮಣ್ಣ ಪರ ಕೆಲಸ ಮಾಡುವ ಬಗ್ಗೆ ಸ್ಪಷ್ಟನೆ ನೀಡಿಲ್ಲ.

    ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವ ಬಂಡಾಯ ಶಮನಗೊಳಿಸುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಸಭೆ ಕರೆದು ವಿಫಲರಾಗಿದ್ದ ಯಡಿಯೂರಪ್ಪ ಅವರು ದಾವಣಗೆರೆಗೆ ತೆರಳಿ ಎಲ್ಲ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.
    ಪಕ್ಷದ ಅಭ್ಯರ್ಥಿ ಜಿಎಂ ಸಿದ್ದೇಶ್ವರ್ ಅವರ ಪತ್ನಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬೆದರಿಕೆ ಹಾಕಿದ್ದ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್ ಬಣ ಇದೀಗ ತಮ್ಮ ನಿಲುವು ಬದಲಾಯಿಸಿದೆ. ಯಡಿಯೂರಪ್ಪ ಅವರು ನೀಡಿದ ಸಲಹೆಗೆ ಸಮ್ಮತಿಸಿದ ಈ ಬಣ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಹೆಸರು ಹೇಳಿ ಮತಯಾಚಿಸುವುದಿಲ್ಲ ಮೊದಲಿಗೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಪರವಾಗಿ ಮತಯಾಚಿಸುತ್ತೇವೆ ಎಂದು ತಿಳಿಸಿದೆ. ಆದರೆ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಈ ವಿಷಯವಾಗಿ ಏನನ್ನು ಹೇಳದಿರುವುದು ಇನ್ನು ಬಿಕ್ಕಟ್ಟು ಶಮನಗೊಂಡಿಲ್ಲ ಎಂಬುದರ ಸಂಕೇತವಾಗಿದೆ.

    ಕೊಪ್ಪಳದಲ್ಲಿ ಟಿಕೆಟ್ ವಂಚಿತ ಸಂಸದ ಕರಡಿ ಸಂಗಣ್ಣ ಅವರು ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ನಾಯಕರ ಸಂಧಾನಕ್ಕೆ ಮಣಿದಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಲ್ಲವೇ ಪಕ್ಷಾಂತರ ಮಾಡುವ ನಿರ್ಧಾರ ಕೈ ಬಿಟ್ಟಿದ್ದಾರೆ ಆದರೆ ತಮ್ಮ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂಬ ಆಹ್ವಾನವನ್ನು ತಿರಸ್ಕರಿಸಿರುವುದು ಚುನಾವಣೆಯಲ್ಲಿ ಅವರು ತಟಸ್ಥ ನಿಲುವು ತಳಯಬಹುದು ಎಂಬ ಸಂದೇಹ ಉಂಟುಮಾಡಿದೆ.
    ರಾಯಚೂರಿನಲ್ಲಿ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದ ಮಾಜಿ ಸಂಸದ ಬಿ ವಿ ನಾಯಕ್ ಅವರು ಪಕ್ಷಾಂತರ ಮಾಡುವ ನಿರ್ಧಾರ ಕೈ ಬಿಟ್ಟಿದ್ದು ಇದೀಗ ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನ ಕೈಗೊಂಡಿದ್ದಾರೆ ಅಲ್ಲವೇ ತಮ್ಮ ಬೆಂಬಲಿಗರಿಗೆ ತಮಗೆ ಸೂಕ್ತವೆನಿಸುವ ತೀರ್ಮಾನ ಕೈಗೊಳ್ಳುವಂತೆ ಹೇಳಿರುವುದು ಬಿಜೆಪಿಗೆ ಸಮಸ್ಯೆ ತಂದೊಡ್ಡುವ ಸಾಧ್ಯತೆ ಇದೆ.
    ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಉಂಟಾಗಿದ್ದ ಬಿಕ್ಕಟ್ಟು ಶಮನಗೊಳಿಸಲು ಹಲವು ಸುತ್ತಿನ ಸಭೆ ನಡೆಸಿ ಕೊಂಚಮಟ್ಟಿಗೆ ಯಶಸ್ಸು ಸಾಧಿಸಿರುವ ಯಡಿಯೂರಪ್ಪ ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ.

    ಆದರೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಯಡಿಯೂರಪ್ಪ ಅವರ ಸಭೆಯಿಂದ ದೂರ ಉಳಿದಿದ್ದು ಹಾಗೂ ಮಾಜಿ ಸಂಸದ ಪ್ರಭಾಕರ ಕೋರೆ ಅವರು ಯಡಿಯೂರಪ್ಪ ಅವರ ಸಲಹೆಯನ್ನು ತಿರಸ್ಕರಿಸಿರುವುದು ಗೊಂದಲ ಇನ್ನೂ ಬಗೆಹರಿದಿಲ್ಲ ಎಂಬುದನ್ನು ಸಾಬೀತುಪಡಿಸಿದೆ.
    ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತ ಸಿದ್ದ ಎಂದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಜೊತೆ ಬಿಜೆಪಿ ಸದ್ಯಕ್ಕೆ ಯಾವುದೇ ರೀತಿಯ ಮಾತುಕತೆ ನಡೆಸದಿರಲು ತೀರ್ಮಾನಿಸಿದೆ ಹೀಗಾಗಿ ಈ ಬಂಡಾಯ ದಿನಗಳಂತೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

    BJP ಈಶ್ವರಪ್ಪ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Next Article ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಯತ್ನ (ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ) | Bengaluru North
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy world reviews ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • Jamesamoto ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Hectorler ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe