Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನವರಿ 24‌ ರಂದು BMTC ಬಸ್ ಇಲ್ಲ..
    ಸುದ್ದಿ

    ಜನವರಿ 24‌ ರಂದು BMTC ಬಸ್ ಇಲ್ಲ..

    vartha chakraBy vartha chakraಜನವರಿ 22, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.22- ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ನಾಡಿದ್ದು(ಜ.24) ಸಾರಿಗೆ ನೌಕರರು ನಗರದಲ್ಲಿ ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲಿರುವುದರಿಂದ, ರಾಜ್ಯಾದ್ಯಂತ ಒಂದು ದಿನ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
    ರಾಜ್ಯ ಸರ್ಕಾರವು 6 ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಿಡಿದೆದ್ದಿರುವ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಜ 24ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.
    ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಹಾಗೂ ವರ್ಕರ್ಸ್‌ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್‌ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್‌ಟಿ ಎಂಪ್ಲಾಯೀಸ್‌ ಯೂನಿಯನ್‌, ಕರಾರಸಾ ಸಂಸ್ಥೆ ಪ.ಜಾ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಿದ್ದಾರೆ.
    ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. 4 ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಈ ವೇಳೆ ಸಾವಿರಾರು ನೌಕರರು ಧರಣಿಯಲ್ಲಿ ಭಾಗಿಯಾಗುತ್ತಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
    ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ಯೋಜನೆ ಮಾಡಿದೆ.
    ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್‌ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.
    ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    2016ರಲ್ಲಿ ಶೇ 12.5ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹಕ್ಕೆ ಸಿದ್ಧತೆಯನ್ನು ನೌಕರರು ಮಾಡಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore bmtc m ಬಸ್ ಸ್ಟ್ರೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಇಂಗ್ಲೆಂಡ್ ನ ಪ್ರಧಾನ ಮಂತ್ರಿ ರಿಷಿ ಸುನಾಕ್’ರಿಗೆ ದಂಡ!
    Next Article ತೆನೆ ಮತ್ತು ಕಮಲದ ಮಧ್ಯೆ ಜಗಳವಾಗಿ ಕೈ ಕಟ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kvmkij ರಲ್ಲಿ ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    • Jwltks ರಲ್ಲಿ ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    • StellaHewly ರಲ್ಲಿ ಕಲೆಕ್ಷನ್ ಕಿಂಗ್ ಯಾರು ಗೊತ್ತಾ..?!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.