ಬೆಂಗಳೂರು
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ,ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿವೆ.
ತಮ್ಮ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂದು ಬಸ್‌ಗಳ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡಿಲ್ಲ ಇದರಿಂದ ರಾಜ್ಯದಲ್ಲಿ ಎಲ್ಲಿಯೂ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಆಗಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರು ಧರಣಿ ನಡೆಸಿದರೆ, ಕೆಎಸ್ ಆರ್ ಟಿ ಸಿ ಯ ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳ ಪ್ರತಿನಿಧಿಗಳು ಧರಣಿ ನಡೆಸಿದರು.
14 ಬೇಡಿಕೆಗಳನ್ನು ಮುಂದಿಟ್ಟು ಆರು ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಹೋರಾಟ ನಡೆಸುತ್ತಿದ್ದೇವೆ. ವೇತನ ಹೆಚ್ಚಳ ಒಪ್ಪಂದ 2020ರ ಜ.1ರಿಂದ ಬಾಕಿ ಉಳಿದಿದೆ. ಮೂರು ವರ್ಷಗಳಿಂದ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸುತ್ತಿದ್ದೇವೆ ಎಂದು ಹೇಳಿದರು.
Previous Articleಬಿಸಿಯೂಟದ ಜೊತೆ ಮೊಟ್ಟೆ ಕೊಡಿ.
Next Article ವಿಮಾನದಲ್ಲಿ ಪ್ರಯಾಣಿಕರು ಯಾಕೆ ಹೀಗೆ?