ಬೆಂಗಳೂರು: ಬೆಂಗಳೂರಿನಲ್ಲಿ ಮಳೆಗಾಲ ಆರಂಭವಾಯ್ತು ಅಂದರೆ ಸಾಕು. ಪಾಲಿಕೆ ನಿರ್ಲಕ್ಷ್ಯಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತವೆ. ಇದೀಗ ಆಲದ ಮರದ ರೆಂಬೆ ನೆಲಕ್ಕೆ ಉರುಳಿದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ನ ತಾವರೇಕೆರೆ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಆಲದ ಮರದ ರೆಂಬೆ ಬಿದ್ದ ಪರಿಣಾಮ ಮಹಿಳೆ ಹಾಗೂ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.