ಬೆಂಗಳೂರು
ಕರ್ನಾಟಕದ ಬಯಲು ಸೀಮೆಯ ಜಿಲ್ಲೆಗಳ ಜನರ ದಶಕಗಳ ಕನಸು ನನಸಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ BJP ನೇತೃತ್ವದ ಕೇಂದ್ರ ಸರ್ಕಾರ ಈ ಪ್ರದೇಶದ ಜನರಿಗೆ ಬಂಪರ್ ಕೊಡುಗೆ ನೀಡಿದೆ. ಬಯಲು ಸೀಮೆಯ ದಾವಣಗೆರೆ, ಚಿತ್ರದುರ್ಗ, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದೆ.
ಹಣಕಾಸು ಮಂತ್ರಿ ನಿರ್ಮಲಾ ಸೀತರಾಮನ್ ತಮ್ಮ ಮಹತ್ವಾಕಾಂಕ್ಷೆಯ ಬಜೆಟ್ ನಲ್ಲಿ ಈ ಘೋಷಣೆ ಮಾಡಿದ್ದಾರೆ.
‘ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು’ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ಘೋಷಣೆಗೆ ಹರ್ಷ ವ್ಯಕ್ತಪಡಿಸಿರುವ ರಾಜ್ಯ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಬಳಸಿ ದಾಖಲೆಯ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸುವ ಮೂಲಕ ಬರಪೀಡಿತ ಜಿಲ್ಲೆಗಳ ಜನರ ಆಶೋತ್ತರ ಈಡೇರಿಸಲಾಗುವುದು ಎಂದು ಹೇಳಿದರು.
3 ಪ್ರತಿಕ್ರಿಯೆಗಳು
индийский пасьянс онлайн бесплатно индийский пасьянс онлайн бесплатно .
снятие ломки наркомана снятие ломки наркомана .
семена почтой купить семена почтой купить .