Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget
    ಬೆಂಗಳೂರು

    ಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget

    vartha chakraBy vartha chakraಸೆಪ್ಟೆಂಬರ್ 4, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಸೆ.4 – ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ವಿವಿಧ ಇಲಾಖೆಗಳಿಗೆ ನಿಗಧಿ ಪಡಿಸಿರುವ ಅನುದಾನ ಬಳಕೆಗೆ ಕ್ರಿಯಾ ಯೋಜನೆ ರೂಪಿಸಿ,ಫೆಬ್ರವರಿ ಅಂತ್ಯದೊಳಗೆ ಅನುದಾನ ಬಳಕೆ ಪೂರ್ಣಗೊಳಿಸಬೇಕು ಎಂದು ‌ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

    ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ‌ ಅವರು ವಿವಿಧ ಇಲಾಖೆಗಳಿಗೆ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು,ಇದನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಸೂಚಿಸಿದರು.
    ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದೆ ‌ಎಂದು ಹೇಳಿದರು.
    ಕಳೆದ ಆರ್ಥಿಕ ವರ್ಷದಲ್ಲಿ ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕೆಂದು ಸೂಚಿಸಿದರು.

     

    ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆ.ಕೆ.ಆರ್‌.ಡಿ.ಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀ ಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಆದೇಶಿಸಿದರು.
    ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.
    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋಟಿ ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಸ್ಟಾಂಡರ್ಡ್‌ ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್. ಎಸ್. ಭೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್‌, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

    Karnataka ಆರೋಗ್ಯ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email
    Previous Articleಗೃಹ ಜ್ಯೋತಿ-ಯೋಜನೆ ಒಂದು ಲಾಭ ಹಲವು… (ಜನಪ್ರಿಯ ಯೋಜನೆಯ ಯಶೋಗಾಥೆ) | Gruha Jyothi Scheme
    Next Article Police ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police
    vartha chakra
    • Website

    Related Posts

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe