ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ತಮಗೂ ಯಾವುದಾದರೂ ಹುದ್ದೆ ಸಿಗಬಹುದು ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ.
ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಮುಖ ನಾಯಕರೊಂದಿಗೆ ಹಲವಾರು ಸುತ್ತಿನಲ್ಲಿ ಸಭೆ ನಡೆಸಿ,ಎಲ್ಲಾ ಲೆಕ್ಕಾಚಾರ ಹಾಕಿ ಇದೀಗ ಲೋಕಸಭೆ ಚುನಾವಣೆಗೂ ಮೊದಲೇ, 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ನೀಡಿದ್ದಾರೆ.
ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತರಲ್ಲಿ ಬಹುತೇಕ ಎಲ್ಲರಿಗೂ ಅಧಿಕಾರ ಸಿಕ್ಕಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಗೆ ಖರ್ಗೆ ಅವರ ಕೆಲವು ಬೆಂಬಲಿಗರೂ ಕೂಡ ಸ್ಥಾನ ಗಿಟ್ಟಿಸಿದ್ದಾರೆ.