ಬೆಂಗಳೂರು – ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಅವರು ಅಭಿನಯಿಸಿರುವ ಸಿನಿಮಾ, ಹಾಡುಗಳು ಮತ್ತು ಜಾಹೀರಾತುಗಳನ್ನು ಪ್ರದರ್ಶಿಸಿಸದಂತೆ ನಿಷೇಧಿಸಲು ಸಾಧ್ಯವಿಲ್ಲ ಎಂದು ರಾಜ್ಯದ ಕೇಂದ್ರ ಮುಖ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ನಟ ಶಿವರಾಜ್ ಕುಮಾರ್ ಅವರ ಪತ್ನಿ ಶ್ರೀಮತಿ ಗೀತಾ ಶಿವರಾಜಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ ಎಂದು ಹೇಳಿದ್ದಾರೆ ಹೀಗಾಗಿ ಸ್ಟಾರ್ ನಟರಾಗಿರುವ ಇವರ ಸಿನಿಮಾಗಳು ಮತದಾರರ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಅವರ ಸಿನಿಮಾಗಳ ಪ್ರದರ್ಶನದ ಮೇಲೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ಮನವಿ ಮಾಡಿತ್ತು.
ಈ ಮನವಿ ಅನ್ವಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಈ ಕುರಿತಂತೆ ಕೇಂದ್ರ ಚುನಾವಣೆ ಆಯೋಗ ನೀಡಿರುವ ನಿರ್ದೇಶನವನ್ನು ಉಲ್ಲೇಖಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ನಟರು ಅಭಿನಯಿಸಿರುವ ಸಿನಿಮಾಗಳು ಮತ್ತು ಜಾಹೀರಾತುಗಳ ಪ್ರಸಾರವನ್ನು ಖಾಸಗಿ ಟಿವಿ ಚಾನೆಲ್ಗಳು ಅಥವಾ ಚಿತ್ರಮಂದಿರಗಳಲ್ಲಿ ನಿರ್ಬಂಧಿಸಲಾಗುವುದಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ ತನ್ನ ನಿರ್ದೇಶನದಲ್ಲಿ ನೀಡಿದೆ. ಅದೇ ಅಂಶವನ್ನು ರಾಜ್ಯ ಚುನಾವಣಾ ಅಧಿಕಾರಿಗಳು ತಮ್ಮ ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರಿ ಸ್ವಾಮ್ಯದ ದೂರದರ್ಶನ ಮತ್ತು ಡಿಡಿ ಚಂದನದಲ್ಲಿ ಚಲನಚಿತ್ರಗಳ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಹೇಳಿದ್ದು, ಜಾಹೀರಾತುಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ.
1 ಟಿಪ್ಪಣಿ
озвучание или озвучивание http://www.ozvuchivanie-pomeshhenij.ru .