Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣಾ ಅಖಾಡದಲ್ಲಿ ಸಿಗುತ್ತಿದೆ ಕಂತೆ ಕಂತೆ ಹಣ | Elections 2024
    Viral

    ಚುನಾವಣಾ ಅಖಾಡದಲ್ಲಿ ಸಿಗುತ್ತಿದೆ ಕಂತೆ ಕಂತೆ ಹಣ | Elections 2024

    vartha chakraBy vartha chakraಮಾರ್ಚ್ 19, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.19- ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿರುವ ಚುನಾವಣೆ ಆಯೋಗ ನೀತಿ ಸಂಹಿತೆ ಜಾರಿಯಾದ 24 ಗಂಟೆಯಲ್ಲಿ ರಾಜ್ಯದಲ್ಲಿ 16.89 ಕೋಟಿ ರೂ ಮೌಲ್ಯದ ನಗದು, ಮದ್ಯ ಮತ್ತು ಆಭರಣಗಳನ್ನು ವಶಕ್ಕೆ ಪಡೆದಿದೆ.
    ಕಟ್ಟುನಿಟ್ಟಾಗಿ ನೀತಿ ಸಂಹಿತೆ ಪಾಲನೆಗೆ ಹಲವಾರು ಹೊಸ ಕ್ರಮಗಳನ್ನು ರೂಪಿಸಿರುವ ಆಯೋಗ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಬೂತ್ ಗಳ ಮೇಲೆ ವಿಶೇಷ ನಿಗಾ ವಹಿಸಿದೆ.
    ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ನಗದು ರೂಪದಲ್ಲಿ ಒಂದು ಕೋಟಿ 45.76 ಲಕ್ಷ ರೂ, ಜೊತೆಗೆ 15.37 ಕೋಟಿ ರೂ. ಮೌಲ್ಯದ ಮದ್ಯ, ಇತರೆ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ತಿಳಿಸಿದೆ.

    ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೇ ಭಾರೀ ಮೊತ್ತದ ಹಣ ಸಾಗಿಸುತ್ತಿದ್ದರೆ ವಶಕ್ಕೆ ಪಡೆದು ಕ್ರಮ ಕೈಗೊಳ್ಳುತ್ತಿದ್ದಾರೆ.
    ಸಾಂಗ್ಲಿಗೆ ಹೋಗುತ್ತಿದ್ದ ಹಣ:
    ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ,93 ಲಕ್ಷದ 50, ಸಾವಿರ ನಗದನ್ನು ವಿಜಯಪುರ ಸಿಇಎನ್ ಕ್ರೈಂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
    ಕಾರಿನಲ್ಲಿ ಹಣ ಸಾಗಿಸುತ್ತಿರುವ ಬಗ್ಗೆ ಖಚಿತ‌ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುನೀಲ್ ಕುಮಾರ್ ನಂದೇಶ್ವರ ಮತ್ತು ಸಿಬ್ಬಂದಿ ಸಿಂದಗಿ ಬೈಪಾಸ್ ನಲ್ಲಿ
    ಮಹಾರಾಷ್ಟ್ರ ನೋಂದಾಣಿ ಇರುವ ಎಂ.ಎಚ್.01 ಸಿಡಿ 7537 ಸಂಖ್ಯೆಯ ಟೊಯೋಟಾ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದರು.ಅದರಲ್ಲಿ ನಗದು ಪತ್ತೆಯಾಗಿದೆ.

    ಈ ಹಣವನ್ನು ಕಾರಿನಲ್ಲಿ ಸಾಂಗ್ಲಿ ಯ ಬಾಲಾಜಿ ನಿಕ್ಕಂ ಮತ್ತು ಸಚಿನ್ ಮೋಹಿತೆ ಎಂಬುವವರು ಸಾಗಿಸುತ್ತಿದ್ದರು.ಮೊತ್ತದ ಬಗ್ಗೆ ಸೂಕ್ತ ದಾಖಲೆಯನ್ನು ಒದಗಿಸದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

    ಮಂಡ್ಯದಲ್ಲಿ ಕೋಟಿ:
    ಕಳೆದ ರಾತ್ರಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ 1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
    ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಹೋಗುತ್ತಿದ್ದ ಕಾರನ್ನು ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಪೊಲೀಸರು ಕೊಂಗಬೋರನದೊಡ್ಡಿ ಬಳಿ ತಡೆದು ಪರಿಶೀಲಿಸಿದಾಗ ಅದರಲ್ಲಿ 99 ಲಕ್ಷದ 20 ಸಾವಿರ ಹಣ ಪತ್ತೆಯಾಗಿದೆ.
    ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹಣ ಹಾಗೂ ಕಾರು ವಶಕ್ಕೆ ಪಡೆಯಲಾಗಿದೆ.
    ಗಿರೀಶ್ ಎಂಬವರ ಕಾರಿನಲ್ಲಿ ಈ ಹಣ ದೊರೆತಿದೆ. ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದು ಸೂಕ್ತ ಉತ್ತರ, ದಾಖಲೆ ನೀಡದ ಕಾರಣ ಹಣ ಸೀಜ್ ಮಾಡಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

    Election Elections ಕಾರು ಚುನಾವಣೆ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಈಗ ರಾಜ, ಮಹಾರಾಜ ಯಾರೂ ಇಲ್ಲ | Mysore
    Next Article ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    10 ಪ್ರತಿಕ್ರಿಯೆಗಳು

    1. dzqfo on ಜೂನ್ 6, 2025 11:17 ಅಪರಾಹ್ನ

      clomid pills can you buy clomid prices where to buy cheap clomid pill where can i buy clomiphene without prescription buying cheap clomid tablets clomiphene generic name cost clomiphene without insurance

      Reply
    2. where to buy cialis no prescription on ಜೂನ್ 8, 2025 9:34 ಅಪರಾಹ್ನ

      More posts like this would bring about the blogosphere more useful.

      Reply
    3. does flagyl treat sinusitis on ಜೂನ್ 10, 2025 3:08 ಅಪರಾಹ್ನ

      This website positively has all of the tidings and facts I needed about this thesis and didn’t know who to ask.

      Reply
    4. d6l5d on ಜೂನ್ 12, 2025 4:16 ಅಪರಾಹ್ನ

      where to buy zithromax without a prescription – buy tindamax generic buy generic metronidazole

      Reply
    5. 7z9cd on ಜೂನ್ 17, 2025 10:20 ಅಪರಾಹ್ನ

      buy inderal no prescription – order inderal 20mg online methotrexate oral

      Reply
    6. 64ku8 on ಜೂನ್ 20, 2025 5:58 ಅಪರಾಹ್ನ

      cheap amoxil pills – buy valsartan 80mg pill purchase combivent for sale

      Reply
    7. a489c on ಜೂನ್ 22, 2025 10:06 ಅಪರಾಹ್ನ

      zithromax over the counter – buy generic tinidazole buy bystolic 5mg for sale

      Reply
    8. un084 on ಜೂನ್ 25, 2025 1:10 ಫೂರ್ವಾಹ್ನ

      cheap augmentin 625mg – atbioinfo ampicillin pills

      Reply
    9. 6lkjx on ಜೂನ್ 28, 2025 4:39 ಫೂರ್ವಾಹ್ನ

      warfarin 5mg price – blood thinner buy losartan 25mg online cheap

      Reply
    10. 2emo6 on ಜೂನ್ 30, 2025 2:00 ಫೂರ್ವಾಹ್ನ

      purchase mobic online cheap – https://moboxsin.com/ mobic 15mg tablet

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • upxDyers ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    • 2awg6 ರಲ್ಲಿ ಮೈಸೂರು-ದರ್ಬಾಂಗ ಎಕ್ಸಪ್ರೇಸ್ ರೈಲು ಅಪಘಾತ
    • qydyz ರಲ್ಲಿ Online ವಂಚನೆ ತಡೆಗೆ‌ Cyber security operations centre
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe