ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
ಗೌರಿ ಗಣೇಶ ಹಬ್ಬದ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಟಾಪನೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ ಚೌತಿ ಕಾರ್ಯಕ್ರಮಕ್ಕೆ ಕಾನೂನು ಬಾಹಿರವಾಗಿ ವಂತಿಗೆ ಸಂಗ್ರಹ ಮಾಡುವ ಹಾಗಿಲ್ಲ
ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ಗೆ ವಿಶೇಷ ಅನುಮತಿ ಪಡೆಯಬೇಕುವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಾಗಿಲ್ಲ ಮೆರವಣಿಗೆ ವೇಳೆ ಏನೇ ಅಹಿತಕರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ.ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಸೇರಿದಂತೆ ಬೆಂಕಿ ಹರಡುವ ಯಾವುದೇ ಸಾಮಾಗ್ರಿಗಳನ್ನು ಇಡಬಾರದು.
ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ ನಿರಪೇಕ್ಷಣಾ ಪತ್ರ ಕಡ್ಡಾಯವಾಗಿ ಪಡೆಯಬೇಕು.
ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಡೆಡ್ ಲೈನ್ ಯಾವುದೇ ಕಾರಣಕ್ಕೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು
ಪ್ರತಿವರ್ಷದಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಗಣೇಶ ಹಬ್ಬದ ಹಿನ್ನೆಲೆ ಯಾವುದೇ ಅಡೆತಡೆಗಳು ಆಗದಂತೆ ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದು ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಆಚರಣೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಕಮಿಷನರ್ ಮಾರ್ಗ ಸೂಚಿ ಹೊರಡಿಸಿದ್ದಾರೆ.