Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪರಿಹಾರಕ್ಕೆ ಕೇಂದ್ರದ ಅಡ್ಡಿ | Drought
    ಪ್ರಚಲಿತ

    ಬರ ಪರಿಹಾರಕ್ಕೆ ಕೇಂದ್ರದ ಅಡ್ಡಿ | Drought

    vartha chakraBy vartha chakraಸೆಪ್ಟೆಂಬರ್ 16, 2023501 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ. 16 – ರಾಜ್ಯದಲ್ಲಿ ಮಳೆ ಅಭಾವದಿಂದ ಬಹುತೇಕ ಬರಗಾಲ ಪೀಡಿತ ಪ್ರದೇಶ ಪೀಡಿತವಾಗಿದೆ.ಈ ಪ್ರದೇಶಗಳನ್ನು ಬರ ಪೀಡಿತ ಎಂದು ಘೋಷಿಸಿ ಅಗತ್ಯ ಪರಿಹಾರ ಕೈಗೊಳ್ಳಲು ಕೇಂದ್ರ ಸರ್ಕಾರದ ನಿಯಮಗಳು ಅಡ್ಡಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಕೇಂದ್ರ ಸರ್ಕಾರ ಪ್ರಕಟಿಸಿರುವ ಬರ ನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಹೇಳಿದ್ದಾರೆ.

    ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಈ ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ.
    ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

    ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ ಎಂದು ಪ್ರತಿಪಾದಿಸಿದ್ದಾರೆ.
    ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ, ಸದಾಕಾಲವೂ ಇದು ಅನ್ವಯಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತ್ರೀಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುದಾರಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ ಎಂದು ಹೇಳಿದ್ದಾರೆ ಆಗಸ್ಟ್-ಸೆಪ್ಟೆಂಬರ್‌ ಅವಧಿಯಲ್ಲಿ ಮಳೆ ಹೆಚ್ಚಾಗಿದೆ.

     

    ಇಂತಹ ಸಂದರ್ಭದಲ್ಲಿ, ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ, ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತ್ರೀಯ ಬರ ಕಾಣದೆ ಹೋಗಬಹುದು. ಈ ಸೂಕ್ಷ್ಮವನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ
    ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್‌) ಅಂಶವೆಂದು ಪರಿಗಣಿಸಬೇಕು ಎಂದಿದ್ದಾರೆ.

    ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
    ಬೆಳೆಹಾನಿ ಸಹಾಯಧನಕ್ಕೆ ಅರ್ಹತೆ ಪಡೆಯಲು ಬರನಿರ್ವಹಣೆ ಕೈಪಿಡಿ 2016 ರಲ್ಲಿನ ನಿಯಮಗಳು ಹಾಗೂ ಎಸ್‌ ಡಿ ಆರ್‌ ಎಫ್‌ / ಎನ್‌ ಡಿ ಆರ್‌ ಎಫ್‌‌ ನಿಯಮಾವಳಿಗಳನ್ನು ಸಮೀಕರಿಸುವ ಅಗತ್ಯವಿದೆ. ಬರ ನಿರ್ವಹಣೆ ಕೈಪಿಡಿಯ ಮಾನದಂಡದಡಿ ಬೆಳೆಹಾನಿ ಸಹಾಯಧನಕ್ಕೆ ಅರ್ಹತೆಗೆ ಪಡೆಯಲು ಶೇ. 50 ರಷ್ಟು ಬೆಳೆಹಾನಿ ಪ್ರಮಾಣ ಅಗತ್ಯವಿರುತ್ತದೆ, ಈ ಪ್ರಮಾಣ ವಿಪತ್ತಿನ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಸ್ ‌ಡಿ ಆರ್ ‌ಎಫ್‌/ ಎನ್‌ ಡಿ ಆರ್‌ ಎಫ್‌ ಮಾನದಂಡಗಳ ಅಡಿ ಸೂಚಿಸಿರುವ ಶೇ.33 ಬೆಳೆ ನಾಶಕ್ಕೆ ವ್ಯತಿರಿಕ್ತವಾಗಿದೆ. ಹಾಗಾಗಿ, ಕೈಪಿಡಿಯಲ್ಲಿನ ಮಾನದಂಡವನ್ನು ಇದಕ್ಕೆ ಹೊಂದಾಣಿಕೆ ಮಾಡುವುದು ಸೂಕ್ತವಾಗಿದೆ ಎಂದಿದ್ದಾರೆ.

    ಈ ಅಂಶಗಳ ಹಿನ್ನೆಲೆಯಲ್ಲಿ ಪ್ರಸಕ್ತ ಬರ ನಿರ್ವಹಣೆಯ ಕೈಪಿಡಿಯಲ್ಲಿರುವ ಮಾನದಂಡಗಳನ್ನು ಅನ್ವಯಿಸುವಾಗ, ಅದನ್ನು ಭೌಗೋಳಿಕವಾಗಿ, ಕೃಷಿ ಚಟುವಟಿಕೆ ಹಾಗೂ ಬೆಳೆಯ ವೈವಿಧ್ಯತೆಯ ಹಿನ್ನೆಲೆಯಲ್ಲಿ ಹೆಚ್ಚು ಹೊಂದಿಕೆಯಾಗುವಂತೆ, ಹೆಚ್ಚು ರೈತಸ್ನೇಹಿಯಾಗುವಂತೆ ಅಳವಡಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಇರುವ ಮಾನದಂಡಗಳಿಗೆ ಸೂಕ್ತ ಮಾರ್ಪಾಡುಗಳನ್ನು ಮಾಡಬೇಕಿದ್ದು, ಅವುಗಳನ್ನು ಮರುಪರಿಶೀಲನೆಗೆ ಒಡ್ಡಲು ಇದು ಸೂಕ್ತ ಸಮಯವಾಗಿದೆ ಎಂದು ತಿಳಿಸಿದ್ದಾರೆ

    drought Government Karnataka News ರಾಜಕೀಯ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    Next Article ಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah
    vartha chakra
    • Website

    Related Posts

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_brst ರಲ್ಲಿ C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    • fen daison kypit_cyOa ರಲ್ಲಿ ಬುಕ್ ಮೈ ಸಿ.ಎಂ | Book My CM
    • fen daison kypit_stst ರಲ್ಲಿ ಬುಕ್ ಮೈ ಸಿ.ಎಂ | Book My CM
    Latest Kannada News

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.