ಬೆಂಗಳೂರು.ಸೆ,5-
ಪ್ರಸಕ್ತ ಸಾಲಿನ ವೃತ್ತಿ ಶಿಕ್ಷಣ ಪ್ರವೇಶ ಕುರಿತಾದ ಗೊಂದಲ ಸದ್ಯಕ್ಕೆ ಇತ್ಯರ್ಥ ಗೊಳ್ಳುವ ಲಕ್ಷಣಗಳು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.ಸಿಇಟಿ ಫಲಿತಾಂಶ ಕುರಿತು ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ.
ಇಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿಶಿಕ್ಷಣ ಪ್ರವೇಶ ಪ್ರಕ್ರಿಯೆ ಗೊಂದಲಕ್ಕೀಡಾಗಿದೆ ಸಿಇಟಿ ಪರೀಕ್ಷೆ ಕುರಿತಾದ ಬಿಕ್ಕಟ್ಟು ಇತ್ಯರ್ಥಗೊಂಡಿಲ್ಲ.ಆದರೆ ಖಾಸಗಿ ವಿಶ್ವವಿದ್ಯಾಲಯಗಳು ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿವೆ.
ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಮಂತ್ರಿ ಡಾ.ಅಶ್ವಥ್ ನಾರಾಯಣ್ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2020-21ರಲ್ಲಿ ಪಿಯು ತೇರ್ಗಡೆಯಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯು ಅಂಕಗಳನ್ನು ಪರಿಗಣಿಸಿ ರ್‍ಯಾಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹಾಗಾಗಿ, ತೀರ್ಪು ಪ್ರಶ್ನಿಸಿ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು
ತೀರ್ಪು ನೀಡಿರುವ ಏಕ ಸದಸ್ಯ ಪೀಠದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಮೇಲ್ಮನವಿ ಸಲ್ಲಿಸಬೇಕೋ ಎನ್ನುವುದನ್ನು ವಕೀಲರು ತೀರ್ಮಾನಿಸುತ್ತಾರೆ. ತ್ವರಿತವಾಗಿ ಯಾವುದು ಆಗುತ್ತದೆಯೋ ಅದನ್ನು ಮಾಡಲು ಸೂಚಿಸಲಾಗಿದೆ ಎಂದರು.
ಕೋರ್ಟ್ ತೀರ್ಪನ್ನು ಪಾಲಿಸಲು ಹೋದರೆ ಈ ವರ್ಷ ಸಿಇಟಿ ಬರೆದಿರುವ 1.50 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಅವರ ರ್‍ಯಾಂಕ್ ಪಟ್ಟಿ ದೊಡ್ಡ ಪ್ರಮಾಣದಲ್ಲಿ ಏರುಪೇರಾಗುತ್ತದೆ ಎಂದು ಅವರು ತಿಳಿಸಿದರು.
ಕೋರ್ಟ್ ಮೆಟ್ಟಿಲೇರಿದ್ದವರು ಯಾವುದೋ ಒಂದು ತಾಂತ್ರಿಕ ಅಂಶಕ್ಕೆ ಅಂಟಿಕೊಂಡಿದ್ದಾರೆ. ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡ ತೀರ್ಮಾನವನ್ನು ಅವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿತ್ತು ಎಂದರು.
Previous Articleಹಬ್ಬದ ರಜೆಗೆ ಬಂದಿದ್ದ ಯುವಕನ ಕೊಲೆ
Next Article ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಲಿಲ್ಲ