ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಹಿನ್ನೆಲೆ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದರು ಅವರು, “ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತ ವಾದ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಅಳವಡಿಸಲು ತೀರ್ಮಾನಿಸಲಾಗುವುದು” ಎಂದರು.
ಇನ್ನು, ಇಂದು ಉಡುಪಿಯಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಈ ಸಭೆಯಲ್ಲಿ ಮೂರು ಜಿಲ್ಲೆಯ ಹಾನಿ, ಸಮಸ್ಯೆ ಪರಿಹಾರದ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ. ಸಭೆಯ ಬಳಿಕ ಬೈಂದೂರು ತಾಲೂಕು ಮತ್ತು ಕಾಪು ತಾಲೂಕಿಗೆ ಭೇಟಿ ಕೊಡುತ್ತೇನೆ. ನೆರವು ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಬಳಿಕ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹತ್ತು ದಿನ ಬಿಟ್ಟು ಭೇಟಿ ನೀಡಲಿದ್ದೇನೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಸಭೆಯಲ್ಲಿ ಸಚಿವ ಆರ್ ಅಶೋಕ್, ಸುನಿಲ್ ಕುಮಾರ್, ಉಡುಪಿ ಉಸ್ತುವಾರಿ ಸಚಿವ ಎಸ್ ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಐದು ಶಾಸಕರು, ಡಿಸಿ ಎಸ್.ಪಿ, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದಾರೆ