ಬೆಂಗಳೂರು,ಜೂ.17:
ಸಹಾಯ ಕೇಳಿ ಬಂದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿ ಹೇಳಿಕೆ ಸಲ್ಲಿಸಿದ್ದಾರೆ.
ತಮ್ಮ ವಕೀಲರ ಜೊತೆಯಲ್ಲಿ ಸಿಐಡಿ ಕೇಂದ್ರ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದೆ ಎಂದು ಹೇಳಿದರು.
ತಮ್ಮ ಬಳಿ ಸಹಾಯಚಿಸಿ ಬಂದ ಮಹಿಳೆಗೆ ಧೈರ್ಯ ತುಂಬಿದ್ದೇನೆ ಅಲ್ಲದೆ ಆಕೆಗೆ ನ್ಯಾಯ ತೊರಗಿಸಿಕೊಡುವ ಭರವಸೆ ನೀಡಿದ್ದೇನೆ ಜೊತೆಗೆ ಹಣಕಾಸು ನೆರವನ್ನು ನೀಡಲಾಗಿದೆ ಹೀಗಿದ್ದರೂ ತಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಸಹಾಯ ಮಾಡಲು ಬರುವವರ ಮೇಲೆ ಪ್ರಕರಣ ದಾಖಲಿಸುವ ಕೆಟ್ಟ ಚಾಳಿಯನ್ನು ಆ ಮಹಿಳೆ ಹೊಂದಿದ್ದಾರೆ ಎಂದು ತನಿಖಾಧಿಕಾರಿಗೆ ತಿಳಿಸಿದ್ದಾರೆ.
ಉನ್ನತ ಸ್ಥಾನದಲ್ಲಿರುವ ತಮಗೆ ರಾಜಕೀಯವಾಗಿ ಹಿನ್ನಡೆ ತರಬೇಕು ಎಂಬ ಉದ್ದೇಶದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ ಇದೊಂದು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ ಎಂದು ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ನಡೆದಿರುವ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ ಹೀಗಾಗಿ ಸರ್ಕಾರ ಈ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರೂ ಅವರು ವಿಚಾರಣೆಗೆ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ನ್ಯಾಯಾಲಯದ ಮೊರೆ ಹೊಕ್ಕಿತ್ತು .ಕೋರ್ಟ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಇದರಿಂದ ಅವರು ಬಂಧನದ ಭೀತಿಗೆ ಸಿಲುಕಿದ್ದರು.
ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ರಿಟ್ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ಆದೇಶದ ವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಇದಾದ ನಂತರ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ಹೇಳಿಕೆ ಸಲ್ಲಿಸಿದ್ದಾರೆ.
Previous Articleಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
Next Article ನಟ ದರ್ಶನ್ ಮ್ಯಾನೇಜರ್ ನಿಗೂಢ ಸಾವು.
3 ಪ್ರತಿಕ್ರಿಯೆಗಳು
курс тенге рубль http://kursy-valut-online.kz/ .
эскорт эскорт .
наркология лечение алкоголизма [url=https://xn—–7kcablenaafvie2ajgchok2abjaz3cd3a1k2h.xn--p1ai]наркология лечение алкоголизма[/url] .