ತನ್ನ ಮನೆಕೆಲಸದಾಕೆಗೆ ಸಹಿಸಲಾರದಂತಹ ಕಿರುಕುಳ ನೀಡಿದ್ದಲ್ಲದೆ ತನ್ನ ಶೌಚಾಲಯವನ್ನು ನಾಲಿಗೆಯಿಂದ ಸ್ವಚ್ಛಗೊಳಿಸಲು ಹೇಳಿದ ಜಾರ್ಖಂಡ್ ಬಿಜೆಪಿ ನಾಯಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಬಿಜೆಪಿ ನಾಯಕಿ ಸೀಮಾ ಪಾತ್ರಾ ತನ್ನ ಮನೆ ಕೆಲಸ ಮಾಡುವ ಸುನೀತಾ ಎನ್ನುವ ಮಹಿಳೆಗೆ ಸತತ ಹಿಂಸೆ ಜೊತೆಗೆ ತಮ್ಮ ನಾಲಿಗೆಯಿಂದ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.ಈ ಮಾಹಿತಿ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದರು
ಸೀಮಾ ಪಾತ್ರಾ ತನ್ನ ಮನೆ ಕೆಲಸದಾಕೆಗೆ ಕಿರುಕುಳ ನೀಡಿದ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಸಮಿತಿ ಜಾರ್ಖಂಡ್‌ನ ಡಿಜಿಪಿಗೆ ಪತ್ರ ಬರೆದಿದ್ದು, ಈ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
Previous ArticleApple Box ನ ನಿರ್ಮಾಪಕಿಯಾದ ರಮ್ಯಾ
Next Article ಜಾರ್ಖಂಡ್ ನಲ್ಲಿ ರೆಸಾರ್ಟ್ ರಾಜಕಾರಣ