ಮೈಸೂರು, ಜೂನ್ 30:
ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಚಾರಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಬಂಧ ಬಂಡೆಯಂತೆ ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.
ತಮ್ಮ ಜೊತೆಯಲ್ಲಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರೂ ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದನ್ನು ಕೇಳುವುದೂ ಇಲ್ಲ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
ಸುರ್ಜೇವಾಲಾ ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು
Previous Articleಹೈದರಾಬಾದ್ ನಲ್ಲಿ ಭೀಕರ ದುರಂತ.
Next Article ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.