Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim
    Viral

    ದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim

    vartha chakraBy vartha chakraಅಕ್ಟೋಬರ್ 19, 2023108 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟದ ಭಾಗವಾಗಿರಲಿದೆ ಎಂದು ಪ್ರಕಟಿಸಿದ್ದರು.
    ಇದರಿಂದಾಗಿ ಪಕ್ಷದಲ್ಲಿ ಗೊಂದಲ ಉಂಟಾಗಿತ್ತು. ಇದೀಗ ಇದಕ್ಕೆ ತೆರೆ ಎಳೆಯಲಾಗಿದ್ದು,ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ.ಅಲ್ಲದೆ ರಾಜ್ಯ ಘಟಕಕ್ಕೆ ಹಂಗಾಮಿ ಅಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಜೆಪಿಭವನದಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಭೆಯ ನಂತರ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಘಟಕವನ್ನು ವಿಸರ್ಜನೆ ಮಾಡಲಾಗಿದೆ.ಪಕ್ಷದ ಕಾರ್ಯ ಚಟುವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಹಾಗೂ ಮುಂದಿನ ಚುನಾವಣೆವರೆಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ (ಅಡಹಾಕ್) ರಾಜ್ಯಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು
    ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರೊಂದಿಗೆ ಕಾರ್ಯ ನಿರ್ವಹಿಸಲು ಇನ್ನು ಮೂರು ದಿನದಲ್ಲಿ ಕೆಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು.
    ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ರಿಮೂವ್ ಮಾಡಲಾಗಿದೆ. ನೀವು ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ ಎಂದು ಭಾವಿಸಬಹುದು ಎಂದು ಹೇಳಿದರು.

    ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಒಕ್ಕಲಿಗರೇ ಆಗಿದ್ದಾರೆ ಎಂದು ನೀವು ಪ್ರಶ್ನಿಸಬಹುದು. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಇದೆ. ಅವರ ನಾಯಕತ್ವವನ್ನು ಗುರುತಿಸಲಾಗಿದೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ರೈತರ ಸಾಲಮನ್ನಾ, ಜನಪ್ರಿಯ ಕಾರ್ಯಕ್ರಮಗಳು, ಚುನಾವಣಾ ಪೂರ್ವದಲ್ಲಿ ನಡೆದ ಜನತಾ ಜಲಧಾರೆ, ಪಂಚರತ್ನ ಕಾರ್ಯಕ್ರಮಗಳಿಂದ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ನಾಯಕರು, ಮುಖಂಡರು ಒಟ್ಟಾಗಿ ತೀರ್ಮಾನಿಸಿ ಕುಮಾರಸ್ವಾಮಿ ಅವರೇ ಅಧ್ಯಕ್ಷರಾಗಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು ರಾಜ್ಯ ಘಟಕ, ರಾಷ್ಟ್ರ ಘಟಕ ಬೇರೆ. ಬೇರೆ ಬೇರೆ ರಾಜ್ಯ ಘಟಕಗಳು ಬೇರೆ. ತಮಿಳುನಾಡಿನ ಘಟಕ ಪಕ್ಷ ಕೈಗೊಳ್ಳುತ್ತಿರುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು ಘಟಕ ಅಲ್ಲಿನ ಸರ್ಕಾರಲ್ಲಿ ಭಾಗಿಯಾಗಿದೆ ಎಂದು ಹೇಳಿದರು. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರುಖ್ ಸೇರಿದಂತೆ ಹಲವು ಮುಖಂಡರು ಪಕ್ಷದಲ್ಲಿ ಇದ್ದಾರೆ. ನಮಗೆ ಅಲ್ಪಸಂಖ್ಯಾತ ಮುಖಂಡರ ಕೊರತೆ ಇಲ್ಲ. ಒಂದೊಂದು ರಾಜ್ಯದಲ್ಲಿ ಒಂದೊಂದು ವಿಧವಾದ ಬೆಳವಣಿಗೆಗಳಿವೆ. ಪಶ್ಚಿಮ ಬಂಗಾಳವೇ ಬೇರೆ, ತ್ರಿಪುರವೇ ಬೇರೆ, ಕರ್ನಾಟಕವೇ ಬೇರೆ ಎಂದು ಅವರು ವಿಶ್ಲೇಷಿಸಿದರು.
    ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಪಕ್ಷದಲ್ಲಿನ ವಿವಿಧ ಘಟಕಗಳ ಜವಾಬ್ದಾರಿ, ಸ್ಥಾನಮಾನ ಮಾರ್ಪಡು ಮಾಡಿರಲಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರು ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    CM IBRAHIM Government Karnataka m News Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    Next Article ಅಕ್ರಮ ಆಸ್ತಿ ಗಳಿಕೆ‌‌ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ಡಿ.ಕೆ.ಶಿವಕುಮಾರ್ | DK Shivakumar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diplomi_bjmi ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Diplomi_rkmi ರಲ್ಲಿ ಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ
    • Diplomi_obmi ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುಖ್ಯಮಂತ್ರಿಗೆ ಶುಭ ಕೋರಿದ ಡಿಸಿಎಂ #varthachakra #dkshivakumar #siddaramaiah #wishing #latestnews #facts
    Subscribe