ಬೆಂಗಳೂರು – ತಾವೇ ಜಾತ್ಯಾತೀತ ಜನತಾದಳದ ಚುನಾಯಿತ ಅಧ್ಯಕ್ಷ ಎಂದು ಘೋಷಿಸಿ ಬಿಜೆಪಿ ಜೊತೆಗಿನ ಮೈತ್ರಿ ವಿರೋಧಿಸಿದ್ದ ಸಿ.ಎಂ.ಇಬ್ರಾಹಿಂ (CM Ibrahim) ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ, ಪಕ್ಷದ ರಾಜ್ಯ ಪರಿಷತ್, ಶಾಸಕಾಂಗ ಪಕ್ಷದ ಸಭೆ, ಕೋಡ್ ಸಮಿತಿ ಮುಂತಾದ ಸಭೆಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಸಹ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ ಎಂದು ಹೇಳಿದ್ದಾರೆ..ಎಂ. ಇಬ್ರಾಹಿಂರವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ನೀಡಿದಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ ಎಂದು ಆದೇಶದಲ್ಲಿ ಹೇಳಲಾಗಿದೆ.