ಹಾಸ್ಯ ಚಕ್ರವರ್ತಿ ನರಸಿಂಹ ರಾಜು ಅವರ ಹಿರಿಯ ಪುತ್ರಿ ಧರ್ಮವತಿ ನಿಧನರಾಗಿದ್ದಾರೆ. ಇಂದು ಮುಂಜಾನೆ 5.30ಕ್ಕೆ ಅವರು ಕೊನೆಯುಸಿರು ಎಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ. ಧರ್ಮವತಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ. ಹೃದಯಾಘಾತದಿಂದ ಧರ್ಮವತಿ ನಿಧನರಾಗಿದ್ದಾರೆ ಎಂದು ಅವರ ಪುತ್ರ, ನಿರ್ದೇಶಕ ಅರವಿಂದ್ ತಿಳಿಸಿದ್ದಾರೆ ಇಂದು ಸಂಜೆ 3.30ರ ಸುಮಾರಿಗೆ ಹೆಬ್ಬಾಳದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.