ಬೆಂಗಳೂರು,ಆ.12 – ಗುತ್ತಿಗೆದಾರರ ಕಾಮಗಾರಿ ಬಿಲ್ ಬಾಕಿ ಪಾವತಿಗೆ ಕಮೀಷನ್ ವಿವಾದ ಬಿಜೆಪಿ ಕೃಪಾ ಪೋಷಿತ ನಾಟಕ ಮಂಡಳಿಯ ಹೊಸ ನಾಟಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಾಖ್ಯಾನ ಮಾಡಿದ್ದಾರೆ.
ವಿವಾದದ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಸರ್ಕಾರದ ಯಾವುದೇ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ, ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಕೆಂಪಣ್ಣ ಮಾತ್ರ ಅಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ವಿಚಾರ ರಾಜಕೀಯ ಮಾಡಿ, ಗುತ್ತಿಗೆದಾರರನ್ನು ಬಳಸಿಕೊಂಡು ಅಶೋಕ್, ಅಶ್ವತ್ ನಾರಾಯಣ, ಗೋಪಾಲಯ್ಯ ಅವರು ತಮ್ಮ ತಿಮಿಂಗಳಗಳ ರಕ್ಷಣೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಈ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು ರಾಜ್ಯದ ಜನರಿಗೆ ದಕ್ಷ, ಭ್ರಷ್ಟಾಚಾರರಹಿತ ಆಡಳಿತ ನೀಡುವ ವಚನ ನೀಡಿ ಅಧಿಕಾರಕ್ಕೆ ಬಂದಿದ್ದು, ಪಾರದರ್ಶಕವಾಗಿ ಸರ್ಕಾರ ನಡೆಸಲು ಬದ್ಧ. ಕರ್ನಾಟಕವನ್ನು ದಕ್ಷ ಆಡಳಿತ ರಾಜ್ಯವಾಗಿ ಮಾಡುವುದು ನಮ್ಮ ಕನಸು. ಇದಕ್ಕಾಗಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು ನಾನು, ಸಿದ್ದರಾಮಯ್ಯ ಅವರು ತಮ್ಮದೇ ಆದ ರಾಜಕೀಯ ಹಿನ್ನೆಲೆ ಹೊಂದಿದ್ದೇವೆ. ಕೆಂಪಣ್ಣ ಅವರು ಬಹಳ ಹಿರಿಯ ಹಾಗೂ ಗೌರವಾನ್ವಿತ ವ್ಯಕ್ತಿ. ಅವರು ಬಹಳ ಜವಾಬ್ದಾರಿ ಹೊಂದಿದ್ದಾರೆ. ಅವರು ಬಿಜೆಪಿ ಸರ್ಕಾರ ಬಾಕಿ ಉಳಿಸಿರುವ ಬಿಲ್ ಪಾವತಿ ಬಗ್ಗೆ ಮನವಿ ಮಾಡಲು ನನ್ನನ್ನು ಭೇಟಿ ಮಾಡಿದ್ದರು. ಬಿಜೆಪಿ ಸರ್ಕಾರ ಯಾಕೆ ಬಿಲ್ ಪಾವತಿ ಮಾಡಲಿಲ್ಲ ಎಂಬುದು ನನ್ನ ಪ್ರಶ್ನೆ ಎಂದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಪೂರ್ಣಗೊಂಡ ಕಾಮಗಾರಿಗಳ ತನಿಖೆ ಮಾಡಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವವರಿಗೆ ಬಿಲ್ ಪಾವತಿ ಮಾಡಲಾಗುವುದು. ಯಾವುದೇ ಗುತ್ತಿಗೆದಾರರಿಗೆ ಕಿರುಕುಳ ನೀಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು ಬಿಜೆಪಿ ನಾಯಕರಿಗೆ ನಮ್ಮ ಐದು ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಕ್ಷೇತ್ರದ ಮಹಿಳೆಯರು ತಿಂಗಳಿಗೆ 2 ಸಾವಿರ ಪ್ರೋತ್ಸಾಹ ಧನ, ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು, ಉಚಿತ ಅಕ್ಕಿ ಹಾಗೂ ವಿದ್ಯುತ್ ಪಡೆಯುತ್ತಿದ್ದು, ನೀವು ಅಧಿಕಾರದಲ್ಲಿದ್ದಾಗ ಇಂತಹ ಒಂದು ಕಾರ್ಯಕ್ರಮ ಮಾಡಲಿಲ್ಲ ಎಂದು ಕೇಳುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಅಶೋಕ್, ಅಶ್ವತ್ಥ್ ನಾರಾಯಣ ಅವರು ಸುಳ್ಳು ಆರೋಪದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ ಎಂದು ಆಪಾದಿಸಿದರು.
ಅಶೋಕ್ ಅವರ ಕಿಕ್ ಬ್ಯಾಕ್, ಬೇರೆಯವರ ಕಿಕ್ ಬ್ಯಾಕ್ ಬಗ್ಗೆ ಚರ್ಚೆ ಮಾಡಲು ಬೇರೆ ಸಮಯ ಇದೆ. ಅವರು ಕಣ್ಣು ಮುಚ್ಚಿ ಮೂರೂವರೆ ವರ್ಷಗಳ ಕಾಲ ಸರ್ಕಾರ ಮಾಡಿದರೆ? ನನಗೆ ಎಲ್ಲವೂ ಗೊತ್ತಿದೆ. ನಾನು ದಾಖಲೆ ಸಮೇತ ಮಾತನಾಡುತ್ತೇನೆ. ಯಾವುದೇ ಬಿಲ್ ಬಾಕಿ ಇದ್ದರೂ ಅವುಗಳ ಪಾವತಿ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಿರುವಾಗ ಕಿಕ್ ಬ್ಯಾಕ್ ಕೇಳಲು ಹೇಗೆ ಸಾಧ್ಯ? ಅವರು ಅಧಿಕಾರದಲ್ಲಿದ್ದಾಗ ಯಾಕೆ ಬಿಲ್ ಪಾವತಿ ಮಾಡಲಿಲ್ಲ? ಅವರ ಕಾರ್ಯವೈಖರಿಯನ್ನು ನಾನು ಶೀಘ್ರದಲ್ಲೇ ದಾಖಲೆ ಸಮೇತ ವಿವರಿಸುತ್ತೇನೆ” ಎಂದು ತಿಳಿಸಿದರು.
ತಮ್ಮ ಮೇಲಿನ ಆರೋಪದ ಬಗ್ಗೆ ಕೇಳಿದಾಗ, “ನಾನು ಸಾರ್ವಜನಿಕ ಜೀವನದಲ್ಲಿರುವವನು. ನನಗೆ ನನ್ನ ಜವಾಬ್ದಾರಿ ಬಗ್ಗೆ ಅರಿವಿದೆ. ಬಿಜೆಪಿ ನಾಯಕರ ಅನೇಕ ಹಗರಣಗಳಿವೆ. ಅವರ ಹಗರಣ ಸಾಬೀತು ಮಾಡಲಿದ್ದೇನೆ. ಹೀಗಾಗಿ ನಾವು ತನಿಖೆಗೆ ಆದೇಶ ನೀಡಿದ್ದೇನೆ. ಅವರು ಸರ್ಕಾರದಲ್ಲಿದ್ದಾಗ ನಾವು ಮಲಗಿರಲಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ನಮಗೆ ಗೊತ್ತಿದೆ” ಎಂದು ಹೇಳಿದರು
20 ಪ್ರತಿಕ್ರಿಯೆಗಳು
Thanks on putting this up. It’s evidently done.
More posts like this would add up to the online space more useful.
inderal 10mg ca – methotrexate for sale online buy methotrexate no prescription
buy amoxil pill – how to buy ipratropium buy ipratropium 100mcg online cheap
buy clavulanate pill – atbioinfo.com acillin cost
coumadin usa – https://coumamide.com/ purchase hyzaar sale
buy meloxicam 15mg sale – mobo sin buy mobic 7.5mg without prescription
order prednisone 10mg online cheap – corticosteroid prednisone 5mg ca
blue pill for ed – site top ed pills
buy diflucan pill – https://gpdifluca.com/ buy generic diflucan
cenforce cheap – site buy cenforce 100mg for sale
cialis and blood pressure – https://ciltadgn.com/# tadalafil 20mg canada
order ranitidine 150mg generic – https://aranitidine.com/ buy ranitidine cheap
does tadalafil lower blood pressure – https://strongtadafl.com/# cialis free trial voucher
More articles like this would remedy the blogosphere richer. online
viagra professional 100 mg – buy 50 mg viagra online how to buy viagra in canada
Greetings! Extremely serviceable advice within this article! It’s the scarcely changes which wish obtain the largest changes. Thanks a quantity quest of sharing! isotretinoin 10mg
This website exceedingly has all of the tidings and facts I needed adjacent to this participant and didn’t positive who to ask. https://ursxdol.com/furosemide-diuretic/
Thanks for putting this up. It’s evidently done. https://prohnrg.com/
I’ll certainly bring to read more. stromectol c’est quoi