Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    ಸುದ್ದಿ

    ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP

    vartha chakraBy vartha chakraಆಗಷ್ಟ್ 12, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.12 – ಗುತ್ತಿಗೆದಾರರ ಕಾಮಗಾರಿ ಬಿಲ್ ಬಾಕಿ ಪಾವತಿಗೆ ಕಮೀಷನ್ ವಿವಾದ ಬಿಜೆಪಿ ಕೃಪಾ ಪೋಷಿತ ನಾಟಕ ಮಂಡಳಿಯ ಹೊಸ ನಾಟಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಾಖ್ಯಾನ ಮಾಡಿದ್ದಾರೆ.
    ವಿವಾದದ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಸರ್ಕಾರದ ಯಾವುದೇ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ, ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

    ಕೆಂಪಣ್ಣ ಮಾತ್ರ ಅಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ವಿಚಾರ ರಾಜಕೀಯ ಮಾಡಿ, ಗುತ್ತಿಗೆದಾರರನ್ನು ಬಳಸಿಕೊಂಡು ಅಶೋಕ್, ಅಶ್ವತ್ ನಾರಾಯಣ, ಗೋಪಾಲಯ್ಯ ಅವರು ತಮ್ಮ ತಿಮಿಂಗಳಗಳ ರಕ್ಷಣೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಈ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು ರಾಜ್ಯದ ಜನರಿಗೆ ದಕ್ಷ, ಭ್ರಷ್ಟಾಚಾರರಹಿತ ಆಡಳಿತ ನೀಡುವ ವಚನ ನೀಡಿ ಅಧಿಕಾರಕ್ಕೆ ಬಂದಿದ್ದು, ಪಾರದರ್ಶಕವಾಗಿ ಸರ್ಕಾರ ನಡೆಸಲು ಬದ್ಧ. ಕರ್ನಾಟಕವನ್ನು ದಕ್ಷ ಆಡಳಿತ ರಾಜ್ಯವಾಗಿ ಮಾಡುವುದು ನಮ್ಮ ಕನಸು. ಇದಕ್ಕಾಗಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು ನಾನು, ಸಿದ್ದರಾಮಯ್ಯ ಅವರು ತಮ್ಮದೇ ಆದ ರಾಜಕೀಯ ಹಿನ್ನೆಲೆ ಹೊಂದಿದ್ದೇವೆ. ಕೆಂಪಣ್ಣ ಅವರು ಬಹಳ ಹಿರಿಯ ಹಾಗೂ ಗೌರವಾನ್ವಿತ ವ್ಯಕ್ತಿ. ಅವರು ಬಹಳ ಜವಾಬ್ದಾರಿ ಹೊಂದಿದ್ದಾರೆ. ಅವರು ಬಿಜೆಪಿ ಸರ್ಕಾರ ಬಾಕಿ ಉಳಿಸಿರುವ ಬಿಲ್ ಪಾವತಿ ಬಗ್ಗೆ ಮನವಿ ಮಾಡಲು ನನ್ನನ್ನು ಭೇಟಿ ಮಾಡಿದ್ದರು. ಬಿಜೆಪಿ ಸರ್ಕಾರ ಯಾಕೆ ಬಿಲ್ ಪಾವತಿ ಮಾಡಲಿಲ್ಲ ಎಂಬುದು ನನ್ನ ಪ್ರಶ್ನೆ ಎಂದರು.

    ಮುಖ್ಯಮಂತ್ರಿಗಳ ನಿರ್ದೇಶನದಂತೆ ಪೂರ್ಣಗೊಂಡ ಕಾಮಗಾರಿಗಳ ತನಿಖೆ ಮಾಡಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವವರಿಗೆ ಬಿಲ್ ಪಾವತಿ ಮಾಡಲಾಗುವುದು. ಯಾವುದೇ ಗುತ್ತಿಗೆದಾರರಿಗೆ ಕಿರುಕುಳ ನೀಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು ಬಿಜೆಪಿ ನಾಯಕರಿಗೆ ನಮ್ಮ ಐದು ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಕ್ಷೇತ್ರದ ಮಹಿಳೆಯರು ತಿಂಗಳಿಗೆ 2 ಸಾವಿರ ಪ್ರೋತ್ಸಾಹ ಧನ, ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು, ಉಚಿತ ಅಕ್ಕಿ ಹಾಗೂ ವಿದ್ಯುತ್ ಪಡೆಯುತ್ತಿದ್ದು, ನೀವು ಅಧಿಕಾರದಲ್ಲಿದ್ದಾಗ ಇಂತಹ ಒಂದು ಕಾರ್ಯಕ್ರಮ ಮಾಡಲಿಲ್ಲ ಎಂದು ಕೇಳುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಅಶೋಕ್, ಅಶ್ವತ್ಥ್ ನಾರಾಯಣ ಅವರು ಸುಳ್ಳು ಆರೋಪದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ ಎಂದು ಆಪಾದಿಸಿದರು.

    ಅಶೋಕ್ ಅವರ ಕಿಕ್ ಬ್ಯಾಕ್, ಬೇರೆಯವರ ಕಿಕ್ ಬ್ಯಾಕ್ ಬಗ್ಗೆ ಚರ್ಚೆ ಮಾಡಲು ಬೇರೆ ಸಮಯ ಇದೆ. ಅವರು ಕಣ್ಣು ಮುಚ್ಚಿ ಮೂರೂವರೆ ವರ್ಷಗಳ ಕಾಲ ಸರ್ಕಾರ ಮಾಡಿದರೆ? ನನಗೆ ಎಲ್ಲವೂ ಗೊತ್ತಿದೆ. ನಾನು ದಾಖಲೆ ಸಮೇತ ಮಾತನಾಡುತ್ತೇನೆ. ಯಾವುದೇ ಬಿಲ್ ಬಾಕಿ ಇದ್ದರೂ ಅವುಗಳ ಪಾವತಿ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಿರುವಾಗ ಕಿಕ್ ಬ್ಯಾಕ್ ಕೇಳಲು ಹೇಗೆ ಸಾಧ್ಯ? ಅವರು ಅಧಿಕಾರದಲ್ಲಿದ್ದಾಗ ಯಾಕೆ ಬಿಲ್ ಪಾವತಿ ಮಾಡಲಿಲ್ಲ? ಅವರ ಕಾರ್ಯವೈಖರಿಯನ್ನು ನಾನು ಶೀಘ್ರದಲ್ಲೇ ದಾಖಲೆ ಸಮೇತ ವಿವರಿಸುತ್ತೇನೆ” ಎಂದು ತಿಳಿಸಿದರು.
    ತಮ್ಮ ಮೇಲಿನ ಆರೋಪದ ಬಗ್ಗೆ ಕೇಳಿದಾಗ, “ನಾನು ಸಾರ್ವಜನಿಕ ಜೀವನದಲ್ಲಿರುವವನು. ನನಗೆ ನನ್ನ ಜವಾಬ್ದಾರಿ ಬಗ್ಗೆ ಅರಿವಿದೆ. ಬಿಜೆಪಿ ನಾಯಕರ ಅನೇಕ ಹಗರಣಗಳಿವೆ. ಅವರ ಹಗರಣ ಸಾಬೀತು ಮಾಡಲಿದ್ದೇನೆ. ಹೀಗಾಗಿ ನಾವು ತನಿಖೆಗೆ ಆದೇಶ ನೀಡಿದ್ದೇನೆ. ಅವರು ಸರ್ಕಾರದಲ್ಲಿದ್ದಾಗ ನಾವು ಮಲಗಿರಲಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ನಮಗೆ ಗೊತ್ತಿದೆ” ಎಂದು ಹೇಳಿದರು

    #commission BJP Karnataka ರಾಜಕೀಯ ಲಂಚ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi
    Next Article ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe