ಬೆಂಗಳೂರು – ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಿಧಾನವಾಗಿ ರಂಗೇರತೊಡಗಿದೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ.
ಅದರಲ್ಲೂ ಪ್ರಧಾನಿ ಮೋದಿ ಅವರ ಅಲೆಯಲ್ಲಿ ಗೆದ್ದು ಬರುತ್ತೇವೆ ಎಂದು ಭಾವಿಸಿರುವ ಬಿಜೆಪಿಯಲ್ಲಿ ಕಣಕ್ಕಿಳಿಯಲು ಬಾರಿ ಪೈಪೋಟಿ ಉಂಟಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಹಲವು ನಾಯಕರು ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ.
ಹಾಲಿ ಸಂಸದರಾಗಿರುವ ಕೆಲವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಕೂಡ ಅನೇಕ ಆಕಾಂಕ್ಷಿಗಳನ್ನು ಹುಟ್ಟು ಹಾಕಿದೆ
ಅದರಲ್ಲಿ ಮೈಸೂರು- ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ ಮೂಡಿಸಿದೆ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪಕ್ಷದ ಹಲವು ಸ್ಥಳೀಯ ನಾಯಕರು ಅಸಮಾಧಾನಗೊಂಡಿದ್ದಾರೆ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಆಡಳಿತ ವಿರೋಧಿ ಅಲೆ ಕಂಡುಬರುತ್ತಿದೆ ಹೀಗಾಗಿ ಹೈಕಮಾಂಡ್ ಈ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
ಯಾವಾಗ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎಂಬ ವರದಿಗಳು ಬಂದಿರುವುದನ್ನು ತಿಳಿದಿರುವ ಮಡಿಕೇರಿಯ ಇಬ್ಬರು ಪ್ರಭಾವಿ ನಾಯಕರಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ದಿಡೀರ್ ಸಕ್ರಿಯರಾಗಿದ್ದು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.
ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಹೊರಗಿನವರೆ ಇಲ್ಲಿಂದ ಆಯ್ಕೆಯಾಗುತ್ತಿದ್ದಾರೆ ಅಲ್ಲದೆ ಬಿಜೆಪಿಯಲ್ಲಿ ಹೊರಗಿನವರಿಗೆ ಮನ್ನಣೆ ನೀಡಲಾಗುತ್ತದೆ ಇದನ್ನು ತಪ್ಪಿಸಿ ಈ ಬಾರಿ ಕೊಡಗು ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು ಎಂದು ಈ ಇಬ್ಬರು ನಾಯಕರು ಮನವಿ ಮಾಡಿದ್ದಾರೆ.
ಅಲ್ಲದೆ ಪ್ರತ್ಯೇಕವಾಗಿ ಈ ಇಬ್ಬರು ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸುತ್ತಿದ್ದಾರೆ.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಪ್ಪಚ್ಚು ರಂಜನ್ ಅವರು ಸಂಘ ಪರಿವಾರದ ಮುಖಂಡರ ನೆರವಿನೊಂದಿಗೆ ಟಿಕೆಟ್ ಗಿಟ್ಟಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.
ಅದೇ ರೀತಿ ಕೆಜಿ ಬೋಪಯ್ಯ ಅವರು ಕೂಡ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಸದಾನಂದ ಗೌಡ ಮತ್ತು ಸಂಘ ಪರಿವಾರ ನಾಯಕ ಪ್ರಭಾಕರ್ ಭಟ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದು ತಮಗೆ ಟಿಕೆಟ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ ಇದು ತಮ್ಮ ಕೊನೆಯ ಚುನಾವಣೆ ಯಾಗಿದ್ದು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಅವಕಾಶ ಕೊಡುವಂತೆ ಈ ನಾಯಕರಲ್ಲಿ ಮನವಿ ಮಾಡುತ್ತಿದ್ದಾರೆ ಹೀಗಾಗಿ ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳು ಯಾರು ಎಂಬ ವಿಷಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ