Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುದ್ದ ಹನುಮೇಗೌಡ ಅವರಿಗೆ ಮುಚ್ಚಿದ ಕಾಂಗ್ರೆಸ್ ಬಾಗಿಲು | Muddu Hanumegowda
    Trending

    ಮುದ್ದ ಹನುಮೇಗೌಡ ಅವರಿಗೆ ಮುಚ್ಚಿದ ಕಾಂಗ್ರೆಸ್ ಬಾಗಿಲು | Muddu Hanumegowda

    vartha chakraBy vartha chakraಫೆಬ್ರವರಿ 13, 2024ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.13- ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಂಸತ್ ಪ್ರವೇಶಿಸಬೇಕು ಎಂಬ ಹಿರಿಯ ನಾಯಕ ಮುದ್ದಹನುಮೇಗೌಡ (Muddu Hanumegowda) ಅವರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೇರಚಿದೆ.
    ಸದ್ಯ ಬಿಜೆಪಿಯಲ್ಲಿರುವ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಸ್ತಾವನೆಗೆ ಹೈಕಮಾಂಡ್ ಅನುಮತಿ ನೀಡಲು ನಿರಾಕರಿಸಿದೆ ಉನ್ನತ ಮೂಲಗಳು ತಿಳಿಸಿವೆ ಈ ಬಾರಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಸಂಸದರು ಆಯ್ಕೆ ಮಾಡಿ ಕಳುಹಿಸಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    ಇದಕ್ಕಾಗಿ ಅನ್ಯ ಪಕ್ಷಗಳ ಪ್ರಭಾವಿ ನಾಯಕರಿಗೆ ಗಾಳ ಹಾಕಿದ್ದು, ಹಲವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ತುಮಕೂರಿನಿಂದ ಮಾಜಿ ಸಂಸದ ಮುದ್ದ ಹನುಮೇ ಗೌಡ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದರು.
    ಸದ್ಯ ಬಿಜೆಪಿಯಲ್ಲಿರುವ ಮುದ್ದಹನುಮೇಗೌಡ ಅವರು, ಬಿಜೆಪಿಯಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದರು .ಆದರೆ ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದರು.
    ಈ ಸಂಬಂಧ ಗೃಹ ಸಚಿವ ಪರಮೇಶ್ವರ್ ಸಹಕಾರ ಸಚಿವ ಕೆ .ಎನ್ .ರಾಜಣ್ಣ ಮಾಜಿ ಸಚಿವ ಹಾಗೂ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿ ಬಳಿಕ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿಯಾಗಿದ್ದರು.

    ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಹೊರತುಪಡಿಸಿ ತುಮಕೂರು ಜಿಲ್ಲೆಯ ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು ಮುದ್ದ ಹನುಮಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವ್ಯಕ್ತಪಡಿಸಿದ್ದರು.
    ಈ ಹಿಂದೆ ಒಂದು ಅವರಿಗೆ ತುಮಕೂರು ವಿಧಾನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದ ಮುಗ್ಧ ಹನುಮಂತ ಅವರು ಎರಡನೇ ಬಾರಿ ಲೋಕಸಭೆಗೆ ಸ್ಪರ್ಧಿಸುವ ವೇಳೆ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿತ್ತು.
    ಈ ಅವಧಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ಕಣಕ್ಕಿಳಿದ ಹಿನ್ನೆಲೆಯಲ್ಲಿ ಮುದ್ದಹನುಮೇಗೌಡ ಅವರು ಸ್ಪರ್ಧೆಯಿಂದ ದೂರ ಉಳಿಯಬೇಕಾಯಿತು ಈ ವೇಳೆ ಅವರಿಗೆ ರಾಜ್ಯಸಭೆ ಸದಸ್ಯತ್ವ ಸೇರಿದಂತೆ ಯಾವುದಾದರೂ ಉನ್ನತ ಹುದ್ದೆ ನೀಡುವ ಭರವಸೆ ನೀಡಲಾಗಿತ್ತು. ಆದರೆ ಹೈಕಮಾಂಡ್ ಈ ಭರವಸೆಯನ್ನು ಈಡೇರಿಸಲಿಲ್ಲ.

    ಇದಾದ ಬಳಿಕ ಮೊನ್ನೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ ಅವರು ಟಿಕೆಟ್ ಗಾಗಿ ಬೇಡಿಕೆ ಸಲ್ಲಿಸಿದರು ಆದರೆ ಅಲ್ಲಿ ಕಾಂಗ್ರೆಸ್ ಹಾಲಿ ಶಾಸಕರು ಇರುವ ಪರಿಣಾಮ ಇವರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು ಬದಲಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ನೀಡಲಾಗಿತ್ತು ಹೈಕಮಾಂಡ್ ನ ಈ ನಿರ್ಧಾರ ವಿರೋಧಿಸಿ ಅಂದು ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು.
    ಅಷ್ಟೇ ಅಲ್ಲದೆ ಆ ನಂತರದಲ್ಲಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೇಣುಗೋಪಾಲ್ ಸೇರಿದಂತೆ ಹಲವರ ವಿರುದ್ಧ ವ್ಯಾಪಕ ಟಿಕೆ ಮಾಡಿದ್ದರು. ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಗೆ ಮುದ್ದಹನುಮೇಗೌಡ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವ ಕುರಿತಂತೆ ಅವರಿಗೆ ಯಾವುದೇ ಭರವಸೆ ನೀಡಲಿಲ್ಲ ಎನ್ನಲಾಗಿದೆ.

    ಇದರಿಂದ ಬೇಸರಗೊಂಡ ಅವರು ಮತ್ತೆ ಕಾಂಗ್ರೆಸ್ ಪಕ್ಷದ ಕದ ತಟ್ಟಿದ್ದರು. ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ನಾಯಕರ ವಿಶ್ವಾಸ ಗಳಿಸಿದ ಅವರು ಆ ಬಳಿಕ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ಸಿಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರು.
    ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಒಲವು ಹೊಂದಿದ್ದರು ಎನ್ನಲಾಗಿದೆ ಈ ವರದಿ ಪಡೆದುಕೊಂಡ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಅವರನ್ನು ಕಣಕ್ಕಿಳಿಸಬೇಕು ಎಂದು ರಾಜ್ಯ ಸಮಿತಿಗೆ ವರದಿ ಸಲ್ಲಿಸಿತ್ತು.

    ಇದಾದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಐಸಿಸಿಗೆ ಪತ್ರ ಬರೆದು ಮುದ್ದ ಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು ಆದರೆ ಎಐಸಿಸಿ ನಾಯಕತ್ವ ಇದೀಗ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅನುಮತಿ ನೀಡಲು ನಿರಾಕರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕಾಂಗ್ರೆಸ್ ಪಕ್ಷದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಮುದ್ದಹನುಮೇಗೌಡ ಅವರಿಗೆ ಪಕ್ಷದಲ್ಲಿ ಸಾಕಷ್ಟು ಗೌರವ ಮತ್ತು ಉನ್ನತ ಹುದ್ದೆ ನೀಡಲಾಗಿತ್ತು ಅನಿವಾರ್ಯ ಕಾರಣಗಳಿಂದ ಎರಡು ಬಾರಿ ಇವರಿಗೆ ಟಿಕೆಟ್ ನಿರಾಕರಿಸಿದ್ದನ್ನೆ ದೊಡ್ಡದನ್ನು ಮಾಡಿ ಪಕ್ಷ ಬಿಟ್ಟಿದ್ದಾರೆ ಒಮ್ಮೆ ಜೆಡಿಎಸ್ ಗೆ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಮರಳಿದರು ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಇದೀಗ ಮತ್ತೆ ಕಾಂಗ್ರೆಸ್ ಗೆ ಬರಲು ಮುಂದಾಗಿದ್ದಾರೆ ಕೇವಲ ಪಕ್ಷದ ಟಿಕೆಟ್ ಗಾ ಗಿ ಇಂತಹ ರಾಜಕಾರಣ ಮಾಡುತ್ತಿರುವ ಇವರ ನಾಯಕತ್ವ ತಮಗೆ ಅಗತ್ಯವಿಲ್ಲ ಎಂದು ಎಐಸಿಸಿ ತನ್ನ ಪತ್ರದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
    ಬುದ್ಧ ಹನುಮಗೌಡ ಅವರ ಸೇರ್ಪಡೆಯ ಕುರಿತಂತೆ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟ ಪಡಿಸಿರುವ ಬಗ್ಗೆ ತುಮಕೂರು ಜಿಲ್ಲೆಯ ನಾಯಕರಿಗೆ ಮಾಹಿತಿ ನೀಡಿರುವ ಡಿಕೆ ಶಿವಕುಮಾರ್ ಅವರು ಇದೀಗ ಲೋಕಸಭೆಗೆ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿ ಹುಡುಕುವಂತೆ ತಿಳಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    Karnataka m News Politics Trending Varthachakra ಕಾಂಗ್ರೆಸ್ ಚುನಾವಣೆ ತುಮಕೂರು ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ರಘುರಾಮ್ ರಾಜನ್ | Raghuram Rajan
    Next Article ವಿದೇಶಿ ಗಿಫ್ಟ್ ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಜಯನಗರ ಮಹಿಳೆ | Jayanagar
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Viajhn ರಲ್ಲಿ ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    • Glennhof ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.