ಬೆಂಗಳೂರು, ಫೆ.13- ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಂಸತ್ ಪ್ರವೇಶಿಸಬೇಕು ಎಂಬ ಹಿರಿಯ ನಾಯಕ ಮುದ್ದಹನುಮೇಗೌಡ (Muddu Hanumegowda) ಅವರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೇರಚಿದೆ.
ಸದ್ಯ ಬಿಜೆಪಿಯಲ್ಲಿರುವ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಸ್ತಾವನೆಗೆ ಹೈಕಮಾಂಡ್ ಅನುಮತಿ ನೀಡಲು ನಿರಾಕರಿಸಿದೆ ಉನ್ನತ ಮೂಲಗಳು ತಿಳಿಸಿವೆ ಈ ಬಾರಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಸಂಸದರು ಆಯ್ಕೆ ಮಾಡಿ ಕಳುಹಿಸಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದಕ್ಕಾಗಿ ಅನ್ಯ ಪಕ್ಷಗಳ ಪ್ರಭಾವಿ ನಾಯಕರಿಗೆ ಗಾಳ ಹಾಕಿದ್ದು, ಹಲವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ತುಮಕೂರಿನಿಂದ ಮಾಜಿ ಸಂಸದ ಮುದ್ದ ಹನುಮೇ ಗೌಡ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದರು.
ಸದ್ಯ ಬಿಜೆಪಿಯಲ್ಲಿರುವ ಮುದ್ದಹನುಮೇಗೌಡ ಅವರು, ಬಿಜೆಪಿಯಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದರು .ಆದರೆ ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದರು.
ಈ ಸಂಬಂಧ ಗೃಹ ಸಚಿವ ಪರಮೇಶ್ವರ್ ಸಹಕಾರ ಸಚಿವ ಕೆ .ಎನ್ .ರಾಜಣ್ಣ ಮಾಜಿ ಸಚಿವ ಹಾಗೂ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿ ಬಳಿಕ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿಯಾಗಿದ್ದರು.
ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಹೊರತುಪಡಿಸಿ ತುಮಕೂರು ಜಿಲ್ಲೆಯ ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು ಮುದ್ದ ಹನುಮಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವ್ಯಕ್ತಪಡಿಸಿದ್ದರು.
ಈ ಹಿಂದೆ ಒಂದು ಅವರಿಗೆ ತುಮಕೂರು ವಿಧಾನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದ ಮುಗ್ಧ ಹನುಮಂತ ಅವರು ಎರಡನೇ ಬಾರಿ ಲೋಕಸಭೆಗೆ ಸ್ಪರ್ಧಿಸುವ ವೇಳೆ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿತ್ತು.
ಈ ಅವಧಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ಕಣಕ್ಕಿಳಿದ ಹಿನ್ನೆಲೆಯಲ್ಲಿ ಮುದ್ದಹನುಮೇಗೌಡ ಅವರು ಸ್ಪರ್ಧೆಯಿಂದ ದೂರ ಉಳಿಯಬೇಕಾಯಿತು ಈ ವೇಳೆ ಅವರಿಗೆ ರಾಜ್ಯಸಭೆ ಸದಸ್ಯತ್ವ ಸೇರಿದಂತೆ ಯಾವುದಾದರೂ ಉನ್ನತ ಹುದ್ದೆ ನೀಡುವ ಭರವಸೆ ನೀಡಲಾಗಿತ್ತು. ಆದರೆ ಹೈಕಮಾಂಡ್ ಈ ಭರವಸೆಯನ್ನು ಈಡೇರಿಸಲಿಲ್ಲ.
ಇದಾದ ಬಳಿಕ ಮೊನ್ನೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ ಅವರು ಟಿಕೆಟ್ ಗಾಗಿ ಬೇಡಿಕೆ ಸಲ್ಲಿಸಿದರು ಆದರೆ ಅಲ್ಲಿ ಕಾಂಗ್ರೆಸ್ ಹಾಲಿ ಶಾಸಕರು ಇರುವ ಪರಿಣಾಮ ಇವರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು ಬದಲಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ನೀಡಲಾಗಿತ್ತು ಹೈಕಮಾಂಡ್ ನ ಈ ನಿರ್ಧಾರ ವಿರೋಧಿಸಿ ಅಂದು ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು.
ಅಷ್ಟೇ ಅಲ್ಲದೆ ಆ ನಂತರದಲ್ಲಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೇಣುಗೋಪಾಲ್ ಸೇರಿದಂತೆ ಹಲವರ ವಿರುದ್ಧ ವ್ಯಾಪಕ ಟಿಕೆ ಮಾಡಿದ್ದರು. ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಗೆ ಮುದ್ದಹನುಮೇಗೌಡ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವ ಕುರಿತಂತೆ ಅವರಿಗೆ ಯಾವುದೇ ಭರವಸೆ ನೀಡಲಿಲ್ಲ ಎನ್ನಲಾಗಿದೆ.
ಇದರಿಂದ ಬೇಸರಗೊಂಡ ಅವರು ಮತ್ತೆ ಕಾಂಗ್ರೆಸ್ ಪಕ್ಷದ ಕದ ತಟ್ಟಿದ್ದರು. ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ನಾಯಕರ ವಿಶ್ವಾಸ ಗಳಿಸಿದ ಅವರು ಆ ಬಳಿಕ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ಸಿಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರು.
ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಒಲವು ಹೊಂದಿದ್ದರು ಎನ್ನಲಾಗಿದೆ ಈ ವರದಿ ಪಡೆದುಕೊಂಡ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಅವರನ್ನು ಕಣಕ್ಕಿಳಿಸಬೇಕು ಎಂದು ರಾಜ್ಯ ಸಮಿತಿಗೆ ವರದಿ ಸಲ್ಲಿಸಿತ್ತು.
ಇದಾದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಐಸಿಸಿಗೆ ಪತ್ರ ಬರೆದು ಮುದ್ದ ಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು ಆದರೆ ಎಐಸಿಸಿ ನಾಯಕತ್ವ ಇದೀಗ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅನುಮತಿ ನೀಡಲು ನಿರಾಕರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಮುದ್ದಹನುಮೇಗೌಡ ಅವರಿಗೆ ಪಕ್ಷದಲ್ಲಿ ಸಾಕಷ್ಟು ಗೌರವ ಮತ್ತು ಉನ್ನತ ಹುದ್ದೆ ನೀಡಲಾಗಿತ್ತು ಅನಿವಾರ್ಯ ಕಾರಣಗಳಿಂದ ಎರಡು ಬಾರಿ ಇವರಿಗೆ ಟಿಕೆಟ್ ನಿರಾಕರಿಸಿದ್ದನ್ನೆ ದೊಡ್ಡದನ್ನು ಮಾಡಿ ಪಕ್ಷ ಬಿಟ್ಟಿದ್ದಾರೆ ಒಮ್ಮೆ ಜೆಡಿಎಸ್ ಗೆ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಮರಳಿದರು ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಇದೀಗ ಮತ್ತೆ ಕಾಂಗ್ರೆಸ್ ಗೆ ಬರಲು ಮುಂದಾಗಿದ್ದಾರೆ ಕೇವಲ ಪಕ್ಷದ ಟಿಕೆಟ್ ಗಾ ಗಿ ಇಂತಹ ರಾಜಕಾರಣ ಮಾಡುತ್ತಿರುವ ಇವರ ನಾಯಕತ್ವ ತಮಗೆ ಅಗತ್ಯವಿಲ್ಲ ಎಂದು ಎಐಸಿಸಿ ತನ್ನ ಪತ್ರದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
ಬುದ್ಧ ಹನುಮಗೌಡ ಅವರ ಸೇರ್ಪಡೆಯ ಕುರಿತಂತೆ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟ ಪಡಿಸಿರುವ ಬಗ್ಗೆ ತುಮಕೂರು ಜಿಲ್ಲೆಯ ನಾಯಕರಿಗೆ ಮಾಹಿತಿ ನೀಡಿರುವ ಡಿಕೆ ಶಿವಕುಮಾರ್ ಅವರು ಇದೀಗ ಲೋಕಸಭೆಗೆ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿ ಹುಡುಕುವಂತೆ ತಿಳಿಸಿರುವುದಾಗಿ ಗೊತ್ತಾಗಿದೆ.