ಬೆಂಗಳೂರು.
Congress ನ ಹಿರಿಯ ನಾಯಕ ಮಾಜಿ ಮಂತ್ರಿ ಟಿ.ಜಾನ್ (T. John) ನಿಧನರಾಗಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ವಿಧಾನಪರಿಷತ್ ಸದಸ್ಯರಾಗಿದ್ದ ಇವರು ಎಸ್ ಎಂ ಕೃಷ್ಣ (SM Krishna) ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಮಾಡಿದ್ದ ಇವರು ಶಿಕ್ಷಣ ಸಂಸ್ಥೆಗಳು ಹಾಗೂ ಹೋಟೆಲ್ ಉದ್ಯಮಿಯಾಗಿ ಹೆಸರು ಮಾಡಿದ್ದರು.
ನಾಳೆ ಶನಿವಾರ ಬೆಂಗಳೂರಿನಲ್ಲಿ ಟಿ.ಜಾನ್ ಅವರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಟಿ.ಜಾನ್ ಅವರ ನಿಧನಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.