Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿ ಆರೋಪದ ಹಿಂದೆ ಅಮಿತ್ ಶಾ ಷಡ್ಯಂತ್ರ
    ರಾಜಕೀಯ

    ರಮೇಶ್ ಜಾರಕಿಹೊಳಿ ಆರೋಪದ ಹಿಂದೆ ಅಮಿತ್ ಶಾ ಷಡ್ಯಂತ್ರ

    vartha chakraBy vartha chakraಜನವರಿ 31, 2023Updated:ಮಾರ್ಚ್ 20, 202326 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಮಾಡಿರುವ ಆರೋಪಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬೊಮ್ಮಾಯಿ ಅವರ ಪಿತೂರಿ ಇದೆ ಎಂದು Congress ಗಂಭೀರ ಆರೋಪ ಮಾಡಿದೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಮೇಶ್ ಬಾಬು ಮಾಜಿ ಸಚಿವರು ತಮ್ಮ ಸುದ್ದಿಗೋಷ್ಠಿಗೂ ಮುನ್ನ ಧಾರವಾಡದಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು, ಈ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿರುವ ಬಗ್ಗೆ ಒಪ್ಪಿಕೊಂಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
    ಈ CD ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಸಾರ್ವಜನಿಕ ಒತ್ತಡಕ್ಕೆ ಮಣಿದು ಮಾರ್ಚ್ 2021 ರಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲಿ ತಮ್ಮ ನಾಯಕರ ಜತೆ ಷಡ್ಯಂತ್ರ ರೂಪಿಸಿ, ಪತ್ರಿಕಾಗೋಷ್ಠಿ ಮಾಡಿ ಆರೋಪ ಮಾಡಿದ್ದಾರೆ ಎಂದು ದೂರಿದರು.

    ಅಚ್ಚರಿಯ ವಿಚಾರ ಎಂದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ B Report ವಿಚಾರವಾಗಿ SIT ನೀಡಿರುವ ವರದಿ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದ್ದು, CD ಪ್ರಕರಣದಲ್ಲಿ ಇಲ್ಲಿಯವರೆಗೆ ಕ್ಲೀನ್ ಚಿಟ್ ದೊರೆತಿಲ್ಲ. ಈ ವಿಚಾರವಾಗಿ ಅವರು ಯಾವುದೇ ಪೊಲೀಸ್ ಠಾಣೆಗಳಲ್ಲಿ ದೂರು ನೀಡದೇ ಈಗ ಪ್ರಕರಣವನ್ನು CBI ತನಿಖೆಗೆ ನೀಡಲು ಕೋರುವುದಾಗಿ ಹೇಳಿರುವುದು ಅನುಮಾನಗಳಿಗೆ ಅವಕಾಶ ನೀಡಿದೆ ಎಂದು ತಿಳಿಸಿದರು. ತಾವು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದಾಗಿ ಹೇಳಿರುವುದು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. BJP ಈ ತನಿಖಾ ಸಂಸ್ಥೆಗಳನ್ನು ತನ್ನ ಅಂಗಸಂಸ್ಥೆಗಳಂತೆ ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಈ ಪ್ರಕರಣವನ್ನು CBI ಗೆ ನೀಡಲು ಒತ್ತಾಯಿಸಲಾಗುತ್ತಿದೆ ಎಂದು ಆಪಾದಿಸಿದರು. ಈ ಹಿಂದೆ JDS BJP ಮೈತ್ರಿ ಸರ್ಕಾರದ ಸಮಯದಲ್ಲಿ BJP ಯಲ್ಲಿದ್ದ ಜನಾರ್ದನ ರೆಡ್ಡಿ ಅವರು ಆಗಿನ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ CD ಆರೋಪ ಮಾಡಿದಾಗ, ನಂತರ ಯಾವುದೇ CD ಬಿಡುಗಡೆ ಮಾಡಲಿಲ್ಲ. ಅಂದು ಆರಂಭವಾದ BJP ಯ CD ಅಂಟು ರೋಗ, ಈಗ ಮುಂದುವರೆದಿದೆ ಎಂದು ದೂರಿದರು.

    ಪ್ರಾರಂಭದಲ್ಲಿ ಇವರ CD ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದ BJP, ಈಗ ಇವರನ್ನು ಸಮರ್ಥನೆ ಮಾಡಿಕೊಳ್ಳುವುದರ ಮೂಲಕ ತನ್ನ ನಿಜ ಬಣ್ಣವನ್ನು ಬಯಲು ಮಾಡಿದೆ ಮತ್ತು ಷಡ್ಯಂತ್ರದ ಭಾಗವಾಗಿ KPCC ಅಧ್ಯಕ್ಷರ ಮೇಲೆ ಅಪಪ್ರಚಾರ ಮಾಡಲು ಮುಂದಾಗಿದೆ ಎಂದು ವಿವರಿಸಿದರು. CD ಪ್ರಕರಣವನ್ನು CBI ತನಿಖೆಗೆ ವಹಿಸುವ ಸಂಬಂಧ ಮುಖ್ಯಮಂತ್ರಿಗಳ ಹೆಸರನ್ನೂ ಇವರು ಬಳಸಿಕೊಂಡಿದ್ದು, ಅವರೂ ಕೂಡ ಈ ಷಡ್ಯಂತ್ರದಲ್ಲಿ ಭಾಗಿಯಾಗಿರುವ ಅನುಮಾನಗಳು ದಟ್ಟವಾಗುತ್ತಿವೆ ಎಂದು ಹೇಳಿದರು. ಪ್ರಚಾರದ ಹೆಸರಿನಲ್ಲಿ ಪದೇ ಪದೇ ಕರ್ನಾಟಕಕ್ಕೆ ಎಡತಾಕುತ್ತಿರುವ ಕೇಂದ್ರ ಗೃಹಸಚಿವರು CD ಆರೋಪಿಗಳಿಗೆ ಬೆಂಬಲ ನೀಡುತ್ತಿರುವುದು ಇವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ CD ಗಳ ವಿಚಾರವಾಗಿ ಹೆಚ್ಚು ಸುದ್ದಿಯಾಗುತ್ತಿದೆ. ತಾವು ಶುದ್ಧವಾಗಿರುವ ಬದಲು, ಬೇರೆಯವರ CD ಇದೆ ಎಂದು ಹೇಳುತ್ತಿರುವುದು ಅವರ ನಿಜವಾದ ಬಣ್ಣ ಬಯಲು ಮಾಡಿದೆ ಎಂದು ತಿಳಿಸಿದರು. ರಾಮನ ಹೆಸರು ಬಳಸುವ ಪಕ್ಷದ ಸಂಸ್ಕೃತಿ ಮಹಿಳೆಯರನ್ನು ಯಾವ ರೀತಿ ನಡೆಸಿಕೊಳ್ಳುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ರಮೇಶ್ ಜಾರಕಿಹೊಳಿ ಅವರ ಮಾತುಗಳು ಸ್ಪಷ್ಟಪಡಿಸುತ್ತವೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ಶಾಸಕಿಯಾಗಿ ತಮ್ಮ ವೈಯಕ್ತಿಕ ಸಾಮರ್ಥ್ಯದ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಆದರೆ ರಮೇಶ್ ಅವರು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೀಳು ಮಟ್ಟದ ಟೀಕೆಗೆ ಮುಂದಾಗಿದ್ದಾರೆ ಎಂದು ದೂರಿದರು.

    ಸಾಮಾನ್ಯವಾಗಿ ಸಂತ್ರಸ್ತರು ದೂರು ನೀಡುತ್ತಾರೆ. ಈ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಮಾಡದೇ, ಆರೋಪಿಯ ನಿರ್ದೇಶನದಂತೆ SIT ರಚಿಸಿ ತನಿಖೆ ಮಾಡಲಾಗಿದೆ. CBI ತನಿಖೆ ಆಗಬೇಕು ಎನ್ನುತ್ತಿರುವ ರಮೇಶ್ ಅವರಿಗೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲವೇ ಅಥವಾ CBI ಮೂಲಕ ಬೇರೆಯವರ ಮೇಲೆ ಪ್ರಕರಣ ದಾಖಲಿಸಲು ಪ್ರಯತ್ನಿಸುತ್ತಿದ್ದಾರಾ? ಎಂದು ಪ್ರಶ್ನಿಸಿದರು. ರಮೇಶ್ ಜಾರಕಿಹೊಳಿರವರು ಮಾಧ್ಯಮಗಳ ಜೊತೆ ಮಾತನಾಡುವಾಗ ಬೆಂಗಳೂರಿನ ಶಾಂತಿನಗರ ಹೌಸಿಂಗ್‌ ಸೊಸೈಟಿ ವಿಚಾರವನ್ನು ಪ್ರಸ್ತಾಪ ಮಾಡಿರುತ್ತಾರೆ. ಇದು ಜನರನ್ನು ಹಾದಿ ತಪ್ಪಿಸುವ ಪ್ರಯತ್ನವಾಗಿದ್ದು, ಅಂದಿನ ಸಹಕಾರ ಸಚಿವರಾಗಿ ಅಕ್ರಮಗಳನ್ನು ಮುಚ್ಚಿಟ್ಟ ಕಾರಣಕ್ಕೆ ಇವರ ಮೇಲೇ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕಾಗಿರುತ್ತದೆ ಎಂದರು. ಸಹಕಾರ ಇಲಾಖೆಯ ಆದೇಶ ಸಂಖ್ಯೆ ಹೆಚ್‌ಎಸ್‌ 105/87-88 ದಿನಾಂಕ 10-03-1988ರ ಆದೇಶದ ಅನ್ವಯ ಕಲಂ 64ರ ಆಡಿಯಲ್ಲಿ ತನಿಖೆ ನಡೆಸಿರುವ ಅಂದಿನ ವಿಚಾರಣಾ ಅಧಿಕಾರಿಗಳು ಬೆಂಗಳೂರಿನ ಸುಮಾರು 98 ಹೌಸಿಂಗ್‌ ಸೊಸೈಟಿಗಳ ಸಂಬಂಧ ವರದಿಯನ್ನು ನೀಡಿರುತ್ತಾರೆ. ಇವುಗಳಲ್ಲಿ 45 ಸೊಸೈಟಿಗಳು ಗಂಭೀರ ಪ್ರಕರಣದಲ್ಲಿ, 15 ಸೊಸೈಟಿಗಳು ಇತರ ಪ್ರಕರಣಗಳಲ್ಲಿ, 26 ಸೊಸೈಟಿಗಳು ಸಾಮಾನ್ಯ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇತರೆ ಸೊಸೈಟಿಗಳು ಮಾಹಿತಿ ನೀಡಿರುವುದಿಲ್ಲವೆಂದು ವರದಿ ನೀಡಿರುತ್ತಾರೆ.

    1988ರ ಸಮಯದಲ್ಲಿ ಶಿವಕುಮಾರ್ ಅವರು ಶಾಸಕರೇ ಆಗಿರಲಿಲ್ಲ. ಅಲ್ಲಿಂದ ಇಲ್ಲಿಯವರೆಗೆ ಈ ಸಹಕಾರ ಸಂಘಗಳ ಮೇಲೆ ಸರ್ಕಾರದ ವತಿಯಿಂದ ನಿರ್ದಿಷ್ಟ ಕಾನೂನು ಕ್ರಮ ಜರುಗಿರುವುದಿಲ್ಲ. ರಾಜ್ಯದ BJP ಸರ್ಕಾರದ ಅವಧಿಯಲ್ಲಿ ಇವುಗಳ ಮೇಲೆ ಕ್ರಮ ಕೈಗೊಳ್ಳದಿರುವ ಕುರಿತು ಸರ್ಕಾರ ಉತ್ತರಿಸಬೇಕಿದೆ. ಅಂದು ಈ ಪ್ರಕರಣವನ್ನು ಮುಚ್ಚಿಹಾಕಲು ಬಂದ ಒತ್ತಡಕ್ಕೆ ಮಣಿಯದಿದ್ದರೆ ಈ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳಲಿಲ್ಲವೇಕೆ? ಈ ಪ್ರಕರಣವನ್ನು ಬಹಿರಂಗಪಡಿಸಲಿಲ್ಲವೇಕೆ? ಈ ಕುರಿತು ರಮೇಶ್ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಅವರದೇ ಸರ್ಕಾರ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

    ಈ ಪ್ರಕರಣದ ಕುರಿತ ಚರ್ಚೆಗೆ ನಾವು ಸಿದ್ಧವಿದ್ದು, ರಮೇಶ್ ಜಾರಕಿಹೊಳಿ ಅವರು ಈ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ ಅವರು ರಮೇಶ್ ಜಾರಕಿಹೊಳಿ ಚುನಾವಣಾ ಸಮಯದಲ್ಲಿ ಸಲ್ಲಿಕೆ ಮಾಡಿರುವ ಪ್ರಮಾಣ ಪತ್ರದಲ್ಲಿ ಮಾಹಿತಿ ಮುಚ್ಚಿಟ್ಟಿರುವ ಸಂಬಂಧ Congress ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ರಮೇಶ್ ಜಾರಕಿಹೊಳಿ ಅನೇಕ ಬೇನಾಮಿ ಸಂಸ್ಥೆಗಳೊಂದಿಗೆ ತಮ್ಮ ವಹಿವಾಟನ್ನು ಇಟ್ಟುಕೊಂಡಿದ್ದು, ಸರ್ಕಾರ ಇದರ ತನಿಖೆಯನ್ನು CBI ಮತ್ತು ED ಗೆ ನೀಡಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ KPCC ಪದಾಧಿಕಾರಿಗಳಾದ ದಿವಾಕರ್, ವಕ್ತಾರರಾದ ರಾಮಚಂದ್ರ ರೆಡ್ಡಿ, ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    Amit Shah BJP CBI CD Congress ED JDS KPCC News Politics ramesh jarakiholi Report ಕಾಂಗ್ರೆಸ್ ಕಾನೂನು ಚುನಾವಣೆ ಧಾರವಾಡ ನ್ಯಾಯ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉದಯ್ ಗರುಡಾಚಾರ್ ನಡೆಗೆ BJP ಕೆಂಗಣ್ಣು
    Next Article ನಾಳೆಯಿಂದ ಕಸ ವಿಲೇವಾರಿಯಲ್ಲಿ ವ್ಯತ್ಯಯ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyaomskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Hectorler ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • ElliottAlods ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe