ಬೆಂಗಳೂರು,ಜ.30-
‘ರಾಜ್ಯದಲ್ಲಿ BJP ಪರವಾದ ಅಲೆ ಬೀಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ Congress ಶಾಸಕನ ಮನೆಯಲ್ಲಿ BJP ಚಿಂತನೆ ಅರಳಿದೆ. ನಾಳೆ ಸಿದ್ದರಾಮಯ್ಯ ಅವರ ಮಗ, ಡಿಕೆ ಶಿವಕುಮಾರ್ ಅವರ ಕುಟುಂಬ ಕೂಡಾ ಬಿಜೆಪಿಗೆ ಸೇರಲಿದ್ದಾರೆ’ ಎಂದು BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ Congress ನ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಮತ್ತವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಅವರು ಮಾತನಾಡಿದರು.
‘Congress ನವರ ಬಸ್ ಹೊರಟಿದೆ. ಹೋಗ್ತಾ, ಹೋಗ್ತಾ ಬ್ರೇಕ್ ಫೇಲ್ ಆಗಲಿದೆ. JDS ಪಂಚರತ್ನ ಯಾತ್ರೆಯೂ ಪಂಕ್ಚರ್ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ BJP 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ಮೈಸೂರು, ಹಾಸನ, ಬೆಂಗಳೂರಿನ ಕಾಂಗ್ರೆಸ್, JDS ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ CM ಬಿ.ಎಸ್.ಯಡಿಯೂರಪ್ಪ, CM ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಜಯಭೇರಿ ಬಾರಿಸಲಿದ್ದೇವೆ’ ಎಂದು ಹೇಳಿದರು.
2 ಪ್ರತಿಕ್ರಿಯೆಗಳು
The thoroughness in this section is noteworthy.
The vividness in this piece is exceptional.