ಮೈಸೂರು,ಜು.2- ಸರ್ಕಾರಿ ನೌಕರರೇ ಎಚ್ಚರ.ಸಾಮಾಜಿಕ ಜಾಲತಾಣಗಳಲ್ಲಿ ಜನ ಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಅಪ್ಲೋಡ್ ಮಾಡಿದರೆ ನಿಮ್ಮ ನೌಕರಿಗೆ ಸಂಚಕಾರ ಬರಲಿದೆ.
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾತ್ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಇದೀಗ ಮೈಸೂರು ನಗರದ
ಪೊಲೀಸ್ ಮುಖ್ಯ ಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ
ಮೈಸೂರಿನ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ.ಪ್ರದೀಪ್ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯ ನಿಯಮಾವಳಿ ವಿರುದ್ಧ ಎಂಬ ಆರೋಪದಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಕಮೆಂಟ್ ನ ಸ್ಕ್ರೀನ್ಶಾಟ್ ಜೊತೆ ಪೊಲೀಸ್ ಕಮಿಷನರ್ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ