ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,329 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿನಿಂದ ಶನಿವಾರ 10 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ನಿಂದ 5,24,757 ಮಂದಿ ಸಾವನ್ನಪ್ಪಿದ್ದಾರೆ.
ಶುಕ್ರವಾರ 7,584 ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಕೂಡ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 103 ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತದಲ್ಲಿ 8,000 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಕೋವಿಡ್ ನಾಲ್ಕನೇ ಅಲೆಯ ಭೀತಿ ಕಾಡುತ್ತಿದೆ.
ಸದ್ಯ ದೇಶದ ದೈನಂದಿನ ಪಾಸಿಟಿವಿಟಿ ದರ ಶೇ 2.41ಕ್ಕೆ ಏರಿಕೆಯಾಗಿದೆ.