ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9923 ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಕಳೆದೊಂದು ದಿನದಲ್ಲಿ 17 ಮಂದಿ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 7293 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಸೋಮವಾರದಂದು 12,781 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು ಹಾಗೂ 18 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದರು. ದೇಶದಲ್ಲಿ ಪ್ರಸ್ತುತ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 79,313 ಆಗಿದೆ. ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟೂ ಸಂಖ್ಯೆ 5,24,890ಕ್ಕೆ ಏರಿಕೆ ಕಂಡಿದೆ