ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೋನಾ ಪ್ರಕರಣ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ. 12,781 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಆದರೆ, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್‌ಗೆ ಸಾವನ್ನಪ್ಪಿದವರ ಸಂಖ್ಯೆ 5,24,873ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 76700 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,537 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,07,900 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.
ನಿನ್ನೆ 2,80,136 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,18,66,707 ಡೋಸ್ ಲಸಿಕೆ ನೀಡಲಾಗಿದೆ. ನಿನ್ನೆ 2,96,050 ಜನರನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗಿದೆ.
ದೇಶದಲ್ಲಿ ಕೊರೋನಾ ತುಸು ಇಳಿಕೆ: 12,781 ಮಂದಿಗೆ ಸೋಂಕು, 18 ಜನ ಸಾವು
Previous Articleಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್ಸೈ ಸಾವು
Next Article ಚಿಕ್ಕಮಗಳೂರಿನಲ್ಲಿ ಭಾರೀ ಅಪಘಾತ