ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.
ಬೆಂಗಳೂರು,ಡಿ.21:
ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೇಳುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೂ ಹೈಕಮಾಂಡ್ ಗು ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಗೊಂದಲ ರಾಜ್ಯ ನಾಯಕರೇ ಸೃಷ್ಟಿ ಮಾಡಿಕೊಟ್ಟಿರುವ ಗೊಂದಲವಾಗಿದೆ. ಹೀಗಾಗಿ ಈ ವಿಚಾರದಲ್ಲಿ ಹೈಕಮಾಂಡ್ ಏನನ್ನು ಹೇಳುವುದಿಲ್ಲ ರಾಜ್ಯ ನಾಯಕರೇ ಸೃಷ್ಟಿಸಿಕೊಂಡಿರುವ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳಿದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು ಎಂದು ತಾಕೀತು ಮಾಡಿದರು
ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷದ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಾರ್ಮಿಕವಾಗಿ ನುಡಿದರು

