ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.
2004ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕ ದಿನ ಪಂದ್ಯ ಆಡುವುದರ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
44 ಏಕದಿನ ಪಂದ್ಯಗಳಲ್ಲಿ ಕಣಕ್ಕೆ ಇಳಿದಿದ್ದ ಕರುಣಾ ಜೈನ್, 987 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಐದು ಅರ್ಧ ಶತಕ ಸಿಡಿಸಿದ್ದಾರೆ.
ಐದು ಟೆಸ್ಟ್ ಪಂದ್ಯಗಳಲ್ಲಿ 195 ರನ್ ಗಳಿಸಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ವಿಕೇಟ್ ಕೀಪರ್ ಆಗಿ ಕರುಣಾ ಜೈನ್ ಮಹತ್ವದ ಕೊಡುಗೆ ನೀಡಿದ್ದಾರೆ.
ನಿವೃತ್ತಿ ಘೋಷಿಸಿದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್
Previous Articleಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ
Next Article ಪ್ರತಿಭಟನೆ ಬಿಸಿಗೆ ಬೆಚ್ಚಿದ ಸರ್ಕಾರ..