ಆನ್ಲೈನ್ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಸ್ಕಾಂ ಮನವಿ ಮಾಡಿದೆ.
ಸೈಬರ್ ವಂಚಕರು ಬೆಸ್ಕಾಂ ಹೆಸರಿನಲ್ಲಿ ಗ್ರಾಹಕರಿಗೆ ಎಸ್ಎಂಎಸ್ ಕಳುಹಿಸಿ, ವಿದ್ಯುತ್ ಬಿಲ್ ಪಾವತಿಸದಿದ್ದರೆ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ ಎಂಬ ಭಯದಿಂದ ಗ್ರಾಹಕರು ತಕ್ಷಣವೇ ಆನ್ಲೈನ್ ಮೂಲಕ ಹಣ ಪಾವತಿಸಿ ಮೋಸ ಹೋಗುತ್ತಿದ್ದಾರೆ.
ಇಂತಹ ಯಾವುದೇ ಎಸ್ಎಂಎಸ್ ಗಳಿಗೆ ಸ್ಪಂದಿಸಿ ಹಣ ಪಾವತಿಸಿ ಮೋಸ ಹೋಗಬೇಡಿ ನಿಮ್ಮ ಬಿಲ್ ಗಳನ್ನು ಬೆಸ್ಕಾಂನ ಅಧಿಕೃತ ಆಪ್ ಮೂಲಕ ಇಲ್ಲವೇ ಸ್ವೀಕಾರ ಕೇಂದ್ರದಲ್ಲಿ ಪಾವತಿಸುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ.
ಈ ವಂಚಕರ ಬಗ್ಗೆ ಈಗಾಗಲೇ ಬೆಸ್ಕಾಂ ಪೊಲೀಸರಿಗೆ ದೂರು ಸಲ್ಲಿಸಿದೆ ಎಂದು ಹೇಳಿದ್ದಾರೆ.