ಬೆಂಗಳೂರು,ಸೆ.21-ನಾನು ಡಿಸಿಪಿ ಮಗ, ಮುಖ್ಯಮಂತ್ರಿ ನನ್ನ ಸಂಬಂಧಿ ಎಂದೇಳಿ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಂಬಳಗೋಡುವಿನಲ್ಲಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಸೆಕ್ಯೂರಿಟಿ ಗಾರ್ಡ್ ಪುನೀತ್ ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,ಅವರ ಸ್ಥಿತಿ ಗಂಭೀರವಾಗಿದೆ.
ಹಲ್ಲೆಗೊಳಗಾದ ಪುನೀತ್ ಅವರು ಕುಂಬಳಗೋಡುವಿನ ದೊಡ್ಡಬೆಲೆಯ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಯುವಕ ವರುಣ್ ಅಪಾರ್ಟ್ಮೆಂಟ್ಗೆ ಇಬ್ಬರು ಯುವತಿಯರು ಹಾಗೂ ಓರ್ವ ಯುವಕನನ್ನು ಕರೆತಂದಿದ್ದ. ಯುವತಿಯರನ್ನು ಕರೆದುಕೊಂಡು ಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸೆಕ್ಯೂರಿಟಿ ಗಾರ್ಡ್ ಪುನೀತ್, ರಾತ್ರಿ 12 ಗಂಟೆ ನಂತರ ಅಪರಿಚಿತರಿಗೆ ಪ್ರವೇಶವಿಲ್ಲ ಎಂದು ಯುವಕನಿಗೆ ಖಡಕ್ ಆಗಿ ಹೇಳಿದ್ದಾರೆ.
ಇದರಿಂದ ಕೋಪಗೊಂಡ ವರುಣ್, ಹಲ್ಲೆ ನಡೆಸಿದ್ದಾನೆ. ನಾನು ಯಾರ್ ಗೊತ್ತಾ? ಡಿಸಿಪಿ ಮಗ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ವರುಣ್, ಪುನೀತ್ ಮೇಲೆ ಹಲ್ಲೆ ನಡೆಸಿದ್ದಾನೆ. ಮತ್ತೊಂದೆಡೆ ಅಪಾರ್ಟ್ಮೆಂಟ್ ನಿಯಮದ ಪ್ರಕಾರ ನಡೆದರೂ ಹಲ್ಲೆ ಮಾಡಿದ್ದಾರೆ. ಕಿವಿ ಪರದೆ ಹರಿದು ಹೋಗುವ ಹಾಗೆ ಹಲ್ಲೆ ಮಾಡಲಾಗಿದೆ. ನನ್ನ ಕಿವಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸೆಕ್ಯೂರಿಟಿ ಗಾರ್ಡ್ ಮೇಲೆ ಕಪಾಳ ಮೋಕ್ಷ ಮಾಡುವ ವಿಡಿಯೋ ರಿಕಾರ್ಡ್ ಆಗಿದೆ. ಅಲ್ಲೇ ಇದ್ದ ಸ್ಥಳೀಯರು ಹಲ್ಲೆ ವಿಡಿಯೋ ರಿಕಾರ್ಡ್ ಮಾಡಿದ್ದಾರೆ. ಅಲ್ಲದೆ ವರುಣ್ ಯುವತಿಯರನ್ನು ಕರೆದುಕೊಂಡು ಬಂದ ದೃಶ್ಯಗಳು ಕೂಡ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿವೆ.
Previous Articleಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
Next Article ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.

1 ಟಿಪ್ಪಣಿ
One click and the night belongs to you – https://gntopama.com/142-2/ , Chase the thrill Catch the win Live the moment .