ಬೆಂಗಳೂರು – ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಧರಣಿ ನಡುವೆ ದೆಹಲಿ ಗಡಿಯಲ್ಲಿ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಹಾಗೂ ಬರ ಪರಿಹಾರಕ್ಕೆ ನೆರವು ಮತ್ತು ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರವನ್ನು ಖಂಡಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಸಚಿವ ಎಚ್ ಕೆ ಪಾಟೀಲ್ ಮಂಡಿಸಿದ ನಿರ್ಣಯ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಇದರ ನಡುವೆ ಗಂಡನ ನಿರ್ಣಯವನ್ನು ಧ್ವನಿ ನಿ ಮತದ ಮೂಲಕ ಅಂಗೀಕರಿಸಲಾಯಿತು ರಾಜ್ಯ ಸರ್ಕಾರದ ಪರವಾಗಿ ನಿರ್ಣಯ ಮಂಡಿಸಿದ ಎಚ್ ಕೆ ಪಾಟೀಲ್,ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ ಎಂದು ಹೇಳಿದರು ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50 ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು.ಇದಕ್ಕೆ ಶಾಸನಾತ್ಮಕ ಮಾನ್ಯತೆ ನೀಡಬೇಕು ಎಂಬ ರೈತರ ಬೇಡಿಕೆಯನ್ನು ರಾಜ್ಯ ಸರ್ಕಾರ ಬೆಂಬಲಿಸಲಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದು ತಿಳಿಸಿದರು.
ಖಂಡನಾ ನಿರ್ಣಯ:
ಒಕ್ಕೂಟ ವ್ಯವಸ್ಥೆಯಲ್ಲಿ ದೇಶದ ಪ್ರತಿಯೊಂದು ರಾಜ್ಯವು ಅರ್ಥವ್ಯವಸ್ಥೆಯ ಭಾಗವಾಗಿವೆ. ಎಲ್ಲಾ ರಾಜ್ಯಗಳ ಅರ್ಥವ್ಯವಸ್ಥೆಯು ಅಭಿವೃದ್ಧಿ ಪಥದಲ್ಲಿರುವಂತೆ ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಸಮಾನವಾದ ಮತ್ತು ಸಮಾನ ಹಂಚಿಕೆಯ ತಳಹದಿಯ ಆಧಾರದ ಮೇಲೆ ಇರಬೇಕು.
ಆದರೆ ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್.ಡಿ.ಎ ನೇತೃತ್ವದ ಸರ್ಕಾರ ಇದಕ್ಕೆ ವಿರುದ್ಧವಾಗಿದೆ.
ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ಅನುದಾನ ಬಿಡುಗಡೆ, ಬರ ಪರಿಹಾರಕ್ಕೆ ಮಾನದಂಡಗಳ ಪ್ರಕಾರ ಕೇಂದ್ರದ ಪಾಲನ್ನು ನೀಡುವಲ್ಲಿ, ಅಭಿವೃದ್ಧಿ ಯೋಜನೆಗಳನ್ನು ಯಾವುದೇ ತಾರತಮ್ಯವಿಲ್ಲದೇ ಹಂಚಿಕೆ ಮಾಡುವಲ್ಲಿ
ವಿಫಲವಾಗಿದೆ.
ಅಭಿವೃದ್ಧಿ ವಂಚಿತ ಮತ್ತು ಬಡ ರಾಜ್ಯಗಳಿಗೆ ಹೆಚ್ಚಿನ ಅನುದಾನ ದೊರಕಬೇಕೆಂಬ ಕಲ್ಪನೆಯ ಜೊತೆಜೊತೆಗೆ ಅತ್ಯುತ್ತಮ ಪ್ರಗತಿ ಸಾಧಿಸಿರುವ ರಾಜ್ಯಗಳಿಗೆ ಅನ್ಯಾಯವನ್ನು ಮಾಡಬಾರದು ಎಂಬ ಕನಿಷ್ಠ ನೈಸರ್ಗಿಕ ನ್ಯಾಯದ ತತ್ವಗಳನ್ನು ಕೂಡ ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲವೆಂಬುದು ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಕೊಡಲಿ ಪೆಟ್ಟು ಹಾಕಿದಂತಾಗುತ್ತಿದೆ.
ಅವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಿದ ಹಣಕಾಸು ಆಯೋಗ ಕರ್ನಾಟಕಕ್ಕೆ ದೊರಕಬೇಕಾದ ನ್ಯಾಯಯುತ ಪಾಲನ್ನು ಕಸಿದುಕೊಂಡು ಘೋರವಾದ ಅನ್ಯಾಯಕ್ಕೆ ಗುರಿಮಾಡಿದೆ.
ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ, ನಾಗರೀಕರ ಹಿತರಕ್ಷಣೆಯಲ್ಲಿ ಸಮಾನ ಹಂಚಿಕೆಯ ಮತ್ತು ತಾರತಮ್ಯ ರಹಿತ ಆರ್ಥಿಕ ಸಂಪನ್ಮೂಲಗಳ ಹಂಚಿಕೆಯ ನಿಲುವುಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕೆಂದು ಮತ್ತು ಕರ್ನಾಟಕ ಜನತೆಯ ಹಿತರಕ್ಷಣೆಯ ವಿಷಯದಲ್ಲಿ ಯಾವುದೇ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ.
ಎಂಬ ನಿರ್ಣಯ ಅಂಗೀಕಾರ ಮಾಡಲಾಯಿತು.
2 ಪ್ರತಿಕ್ರಿಯೆಗಳು
лучшие порно видео лучшие порно видео .
вызов нарколога на дом частная скорая помощь вызов нарколога на дом частная скорая помощь .