ನವದೆಹಲಿ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ನೀಡಿದ್ದು ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
2006-07ರಲ್ಲಿ ನಡೆಸಿದ್ದ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಬಿಎಸ್ವೈ ವಿರುದ್ಧ ಕ್ರಿಮಿನಲ್ ತನಿಖೆಗೆ ಆದೇಶಿಸಿತ್ತು.
2020ರಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದ್ದು ಕ್ರಿಮಿನಲ್ ತನಿಖೆಗೆ ತಡೆ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್ನಿಂದ ಬಿಎಸ್ವೈಗೆ ಬಿಗ್ ರಿಲೀಫ್
Previous ArticlePSI ನೇಮಕಾತಿ: ಐವರ ಜಾಮೀನು ಅರ್ಜಿ ವಜಾ
Next Article ನಾಪತ್ತೆಯಾಗಿದ್ದ ಆಫ್ರಿಕನ್ ಗಿಳಿ ಮರಳಿ ಗೂಡಿಗೆ