ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪತ್ ಯೋಜನೆ ವಿರೋಧಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರು ಹಾಗು ಕಾರ್ಯಕರ್ತರಿಗೆ ಪಕ್ಷ ಸೂಚನೆ ನೀಡಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಯೋಜನೆಯಿಂದ ದೇಶದ
ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ಮುಟ್ಟಿಸಬೇಕು ಎಂದು ಹೇಳಿದರು.
ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ ಎಂದರು.
ಬೇಕಿದ್ದರೆ ಬಿಜೆಪಿ ನಾಯಕರ ಮಕ್ಕಳು ಆಗ್ನಿಪತ್ ಮೂಲಕ ಸೇನೆ ಸೇರಲಿ. ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ? ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ. ಯೋಧರ ವೇತನ ಹಾಗು ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಸೆಸ್ ಹಾಕಲಿ’ ಎಂದು ತಿಳಿಸಿದರು.
Previous Articleಚಾರ್ಲಿ ಬಾಂಡಿಂಗ್ ಸಾಂಗ್ ಬಿಡುಗಡೆ
Next Article ರಾಜ್ಯದ ವಿವಿಧೆಡೆ ಲಘು ಭೂಕಂಪ: ಜನರಿಗೆ ಆತಂಕ