ಬೆಂಗಳೂರು:
‘BJP ನಾಯಕ ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದು, ಈಗ ಅದು ಮತ್ತೆ ಸಿಗುತ್ತಿಲ್ಲವಲ್ಲ ಎಂಬ ಹತಾಶೆಯಲ್ಲಿ ಮಾತನಾಡಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರಿಗೆ ಅವರ ಪಕ್ಷದವರು ಉತ್ತಮವಾದ ಚಿಕಿತ್ಸೆ ಕೊಡಿಸಲಿ’ ಎಂದು KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಮೇಶ್ ಜಾರಕಿಹೊಳಿ ಮಾತು, ಕತೆ ಕೇಳಿ ನನಗೆ ಅಯ್ಯೋ ಎನಿಸುತ್ತಿದೆ. ಅವರು ಯಾವ ತನಿಖೆಯಾದರೂ ಮಾಡಿಸಿಕೊಳ್ಳಲಿ. ನಾವು ಯಾರನ್ನೂ ತಡೆದಿಲ್ಲ. ನಾನು ಅವರ ಬಗ್ಗೆ ಹೇಳಿಕೆ ನೀಡುವುದಿಲ್ಲ’ ಎಂದರು. ‘ನನ್ನ ರಾಜಕೀಯ ಜೀವನ ಮುಗಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ ನಾನು ಅವರಿಗೆ ಶುಭಕೋರುತ್ತೇನೆ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ’ ಎಂದರು.
‘ನನ್ನ ವಿದೇಶದ ಆಸ್ತಿ ಆಡಿಯೋ ವಿಚಾರ ನಿಜವಾಗಲಿ. ಅದರಲ್ಲಿ ಉಲ್ಲೇಖಿಸಿರುವ ಆಸ್ತಿಯಲ್ಲಿ ಶೇ.10 ರಷ್ಟಾದರೂ ನನಗೆ ಸಿಗಲಿ. ಎಲ್ಲೆಲ್ಲಿ ಆ ಮನೆಗಳಿವೆ ಎಂದು ವಿಳಾಸ ಕೊಟ್ಟರೆ ಹೋಗಿ ಒಂದೊಂದು ದಿನ ಇದ್ದು ಬರಬಹುದು. ಬೇಕಾದರೆ ಅವರಿಗೆ ಉಡುಗೊರೆಯಾಗಿ ನೀಡೋಣ’ ಎಂದು ತಿಳಿಸಿದರು. ಕಾಶ್ಮೀರದಲ್ಲಿ ತೆರೆ ಬಿದ್ದ ‘ಭಾರತ ಜೋಡೋ ಯಾತ್ರೆ ದೇಶದಲ್ಲಿನ ಸೌಹಾರ್ದತೆ, ಯುವಕರು, ರೈತರ ಸಮಸ್ಯೆಗೆ ಧ್ವನಿಯಾಗಿದೆ. ಆಮೂಲಕ ದೇಶದ ಐಕ್ಯತೆಗಾಗಿ, ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ. ಮಹಾತ್ಮ ಗಾಂಧಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಾವ ರೀತಿ ತ್ಯಾಗ, ಹೋರಾಟ ಮಾಡಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಪೂರ್ವದಿಂದ ಪಶ್ಚಿಮಕ್ಕೆ ಈ ಯಾತ್ರೆ ಮಾಡಬೇಕು ಎಂಬ ಒತ್ತಡ ಕೂಡ ಅವರ ಮೇಲಿದೆ. ಮುಂದಿನ ದಿನಗಳಲ್ಲಿ ಅವರು ತೀರ್ಮಾನ ಮಾಡಲಿದ್ದು, ಅವರ ತೀರ್ಮಾನವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ’ ಎಂದು ಹೇಳಿದರು.
‘ಸಮಾರೋಪ ಸಮಾರಂಭ ಬಹಳ ಅತ್ಯುತ್ತಮವಾಗಿ ನಡೆದಿದೆ. ನಾನು ಕನ್ಯಾಕುಮಾರಿ ಕಾರ್ಯಕ್ರಮ ಹಾಗೂ ಕಾಶ್ಮೀರದ ಕಾರ್ಯಕ್ರಮ ಎರಡಕ್ಕೂ ಹೋಗಿದ್ದೆ. ನಮ್ಮ ರಾಜ್ಯದಲ್ಲೂ ಬಹಳ ಚೆನ್ನಾಗಿ ಯಾತ್ರೆ ಸಾಗಿದೆ, ನಮ್ಮ ಆತಿಥ್ಯ, ಉಪಚಾರವನ್ನು ದೇಶದ ಎಲ್ಲ ನಾಯಕರು ಸ್ಮರಿಸಿದರು. ನಮ್ಮ ಪಕ್ಷದ ಕಾರ್ಯಕರ್ತರು ಈ ಯಾತ್ರೆಯಲ್ಲಿ ಸಾಗಿದ್ದರು. ದೇಶದಲ್ಲಿ Congress ಪಕ್ಷಕ್ಕೆ ಈ ಯಾತ್ರೆ ಜೀವ ತುಂಬಿದೆ. ಜಮ್ಮು ಕಾಶ್ಮೀರದಲ್ಲೂ ಯಾತ್ರೆ ಸಮಯದಲ್ಲಿ ರೈತರು, ಯುವಕರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ನೀಡಿದರು. ಕೊನೆ ದಿನ ವಿಪರೀತ ಹಿಮ, ಚಳಿ ಇತ್ತು. ಈ ರೀತಿಯ ಹಿಮಪಾತ ನೋಡಿದ್ದು ನನಗೆ ಹೊಸ ಅನುಭವ. ನಾವು ಇಂತಹ ಪ್ರಕೃತಿ ಸೌಂದರ್ಯ ಸವಿಯಲು ಯಾವುದೇ ವಿದೇಶಕ್ಕೆ ಹೋಗುವುದು ಬೇಡ. ಕಾಶ್ಮೀರಕ್ಕೆ ಪ್ರವಾಸ ಮಾಡಿದರೆ ಸಾಕು ಎಂದು ನಮ್ಮ ರಾಜ್ಯದವರಿಗೆ ಹೇಳುತ್ತೇನೆ’ ಎಂದು ಹೇಳಿದರು.
2 ಪ್ರತಿಕ್ರಿಯೆಗಳು
Интеграция мультимедийных систем Интеграция мультимедийных систем .
интересные бизнес идеи интересные бизнес идеи .