ಬೆಂಗಳೂರು, ಅ.28- ಅಧಿಕಾರ ಹಂಚಿಕೆ, ಮಂತ್ರಿ ಮಂಡಲ ವಿಸ್ತರಣೆ ಮೊದಲಾದ ವಿಷಯಗಳ ಕುರಿತು ಪಕ್ಷದ ಮುಖಂಡರು ಬಹಿರಂಗ ಹೇಳಿಕೆ ನೀಡುವ ಮೂಲಕ ಉಂಟಾಗುತ್ತಿರುವ ಗೊಂದಲಗಳಿಗೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದೆ.
ಈ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಪಕ್ಷದ ಶಾಸಕರು ಹಾಗೂ ಮುಖಂಡರ ಬಾಯಿಗೆ ಬೀಗ ಹಾಕಿದ್ದಾರೆ.
ಪಕ್ಷದ ಶಾಸಕ ಅಥವಾ ಮುಖಂಡ ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ
ಇಂತಹ ಎಚ್ಚರಿಕೆಯ ನಂತರವೂ ಯಾರಾದರೂ ಹೇಳಿಕೆ ನೀಡಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸಿ ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ತಮಗೆ ಗೊತ್ತಿದೆ. ಫಲಿಸುವುದಿಲ್ಲ ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ.ಅವರ ತಂತ್ರ ಫಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

