ತಿರುವಣ್ಣಾಮಲೈ,ಅ. 07:
ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸೇರಿದಂತೆ ಹಲವಾರು ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ಕುತೂಹಲ ಮೂಡಿಸಿದೆ.
ತಮಿಳುನಾಡಿನ ತಿರುವಣ್ಣಾಮಲೈಗೆ ತೆರಳಿದ ಅವರು ಇಲ್ಲಿನ ಪುರಾಣ ಪ್ರಸಿದ್ಧ ಅರುಣಾಚಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುಂಚಿತವಾಗಿ ಈ ದೇವಾಲಯಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವ ಶಕ್ತಿ ದೊರೆಯಲಿ ಮತ್ತು ಸಮೃದ್ಧಿಯಾಗಿ ಮಳೆ ಬೀಳಲಿ ಎಂದು ಪ್ರಾರ್ಥಿಸಿದ್ದೆ. ಈ ಕಾರಣಕ್ಕೆ ಮತ್ತೆ ದೇವರ ದರ್ಶನ ಮಾಡಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ” ಎಂದು ಹೇಳಿದರು.
ಈ ದೇವಾಲಯ ಅತ್ಯುತ್ತಮ ವಾಸ್ತುಶಿಲ್ಪದಿಂದ ಕೂಡಿದ್ದು, ಸುಂದರವಾಗಿದೆ. ನಮ್ಮ ನೆಲದ ಶಿಲ್ಪಿಗಳು ಒಂದು ಸಾವಿರ ವರ್ಷಗಳ ಹಿಂದೆಯೇ ಅದ್ಬುತ ಕೈಚಳಕ ತೋರಿಸಿದ್ದಾರೆ” ಎಂದರು.
“ಕಳೆದ ವರ್ಷಕ್ಕೆ ಹೋಲಿಸಿದರೆ, ದೇವಸ್ಥಾನವನ್ನು ತಮಿಳುನಾಡು ಸರ್ಕಾರ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಇದು ನನಗೆ ಹೆಚ್ಚು ಸಂತೋಷವನ್ನು ನೀಡಿತು” ಎಂದು ಹೇಳಿದರು.
ತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.
Previous Articleಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
Next Article ಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.