ಬೆಂಗಳೂರು, ಏ.18- ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕ ಬಸನ ಗೌಡ ಪಾಟೀಲ್ ಯತ್ನಾಳ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮುಗಿಯುತಿದ್ದಂತೆ ಕರ್ನಾಟಕದಲ್ಲಿ ಮಹತ್ವದ ರಾಜಕೀಯ ವಿದ್ಯಮಾನಗಳು ನಡೆಯಲಿವೆ ಚುನಾವಣೆ ಮುಗಿದ 15 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದ್ದತಿಯಾಗ ಮಾಡಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆರಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಕೆಲ ಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿಯ ಶಿವಕುಮಾರ್ ಒಪ್ಪಂದ ಏರ್ಪಡಿಸಿಕೊಂಡಿದ್ದಾರೆ . ಚುನಾವಣೆಯಲ್ಲಿ ಗೆದ್ದ ನಂತರ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿಯಲಿದ್ದಾರೆ ಅದರ ಪರಿಣಾಮವಾಗಿ ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದರು.
ಹೆಣದಿರುವ ರಾಜಕೀಯ ತಂತ್ರವಾಗಿದೆ ಆದರೆ ಫಲಿತಾಂಶ ಈ ರೀತಿ ಆಗುವುದಿಲ್ಲ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ತಕ್ಷಣವೇ ಕಾಂಗ್ರೆಸ್ ಸರ್ಕಾರ ಪತನ ಹೊಂದಲಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ನೇತೃತ್ವದ ಸರಕಾರ ಪತನ ಹೊಂದಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಷ್ಟೇ ಅಲ್ಲ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕೂಡ ಹೋಗಲಿವೆ ಎಂದು ಭವಿಷ್ಯ ನುಡಿದರು.
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಅನಿವಾರ್ಯ ಅವರನ್ನು ಬಿಟ್ಟರೆ ಪರ್ಯಾಯ ನಾಯಕರು ಇಲ್ಲ ಎನ್ನುವುದು ಜನರಿಗೆ ಮನದಟ್ಟಾಗಿದೆ ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಮತ್ತೆ ಎನ್.ಡಿ.ಎ ಸರ್ಕಾರ ಆರ್ಥಿಕ ಬರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ತಾವು ಆರಂಭಿಸಿರುವ ಸಮರ ನಿಲ್ಲುವುದಿಲ್ಲ ಬಿಜೆಪಿಯನ್ನು ಅಪ್ಪ ಮಕ್ಕಳ ಹಿಡಿತದಿಂದ ಮುಕ್ತಿ ಮಾಡಲು ತಾವು ಹೋರಾಟ ನಡೆಸುತ್ತಿದ್ದೇನೆ ಎಂದು ತಿಳಿಸಿದರು.