ನವದೆಹಲಿ – ನನ್ನ ವಿರುದ್ಧದ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್ ಪಡೆದ ನಂತರ ಜನರ ಮನಸ್ಥಿತಿ ಮತ್ತು ನಾಲಿಗೆಯ ಬಗ್ಗೆ ನನಗೆ ಸತ್ಯದರ್ಶನವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ” ಎಂದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಅಲೆ:
ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ.
ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.
ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು” ಎಂದು ಹೇಳಿದರು.
ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರ್ಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.
ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಬಗ್ಗೆ ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.


2 ಪ್ರತಿಕ್ರಿಯೆಗಳು
Mostbet entrega bГґnus turbinados e saques rГЎpidos para vocГЄ aproveitar logo – https://mostbetpt.pro/pagamento/ , Mostbet – diversГЈo garantida e recompensas que vГЈo te surpreender .
The ultimate escape into nonstop action and real rewards – https://atamsulosin.com/betano-casino-2026-bonuses-slots-real-payouts/ , Where fortune meets fire — and you’re in the middle .