ಬೆಂಗಳೂರು,
ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾಮಾಜಿಕ ಜಾಲತಾಣವೊಂದರಲ್ಲಿ ಹಾಕಿರುವ ಪೋಸ್ಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ
ಪದಶಕ್ತಿ, ವಿಶ್ವಶಕ್ತಿ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಒಪ್ಪಂದ ಆಗಿತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತನ್ನು ಗ್ಯಾರೆಂಟಿಯಾಗಿ ಉಳಿಸಿಕೊಳ್ಳುತ್ತಾರೆ ಎಂದು ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಹಾಕಿರುವ ಪದಶಕ್ತಿ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂಬ ಪೋಸ್ಟ್ ಸಿದ್ದರಾಮಯ್ಯ ಅವರಿಗೆ ಕೊಟ್ಟ ಮಾತು ನೆನಪಿಸಿರುವಂತೆ ಇದೆ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ತಾವು ಸರಿರಾತ್ರಿಯಲ್ಲೂ ಕೆಲಸ ಮಾಡುತ್ತಿರುವುದು, ಅರ್ಧ ರಾತ್ರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿರುವ ಫೋಟೋವನ್ನು ಲಗತ್ತಿಸಿ ವರ್ಡ್ ಪವರ್ ಈಸ್, ವರ್ಲ್ಡ್ ಪವರ್ ಎಂದು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಸಮಾರಂಭದಲ್ಲೂ ಕೂಡ ಕೊಟ್ಟ ಮಾತಿನ ಕುರಿತಾಗಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು.
ಡಿ.ಕೆ ಶಿವಕುಮಾರ್ ಪೋಸ್ಟ್ ಭಾರಿ ವೈರಲ್
Previous Articleಹೈಕೋರ್ಟ್‌ನಲ್ಲಿ ಶಾಂತಕುಮಾರ್ ಗೆಲುವು
Next Article ಹಿರಿಯ ಹಾಸ್ಯನಟ ಉಮೇಶ್ ವಿಧಿವಶ

