Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    ಡಿ.ಕೆ.ಶಿವಕುಮಾರ್

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    vartha chakraBy vartha chakraಫೆಬ್ರವರಿ 4, 20261 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆಯೂ ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ಕನಕೋತ್ಸವವನ್ನು ಅದ್ದೂರಿಯಾಗಿ ಆಯೋಜಿಸುವ ಮೂಲಕ ರಾಜ್ಯದ ಗಮನ ಸೆಳೆದರು.
    ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ನೇತೃತ್ವದಲ್ಲಿ ಕಲೆ, ಸಂಸ್ಕೃತಿ ಹಾಗೂ ಕ್ರೀಡೆಗೆ ಉತ್ತೇಜನ ನೀಡಲು ಕನಕಪುರದಲ್ಲಿ ಡಿ.ಕೆ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಕನಕೋತ್ಸವ ನಡೆಯಿತು.
    ಜನವರಿ 28 ರಿಂದ ಫೆಬ್ರವರಿ 1 ರವರೆಗೆ ಒಟ್ಟು ಐದು ದಿನಗಳ ಕಾಲ ಈ ಉತ್ಸವ ಬಹಳ ಅದ್ದೂರಿಯಾಗಿ ಜರುಗಿದ ಈ ಉತ್ಸವ ಕೇವಲ ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವವಾಗಿ ಮಾತ್ರವೇ ಗಮನ ಸೆಳೆಯಲಿಲ್ಲ ಬದಲಾಗಿ ಡಿಕೆ ಶಿವಕುಮಾರ್ ಸಹೋದರರ ಶಕ್ತಿ ಪ್ರದರ್ಶನ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ದಿಕ್ಸೂಚಿಯಂತೆ ಇದು ಗೋಚರಿಸಿತು.
    ಉತ್ಸವದ ಮೊದಲ ದಿನ ಸುಮಾರು 300ಕ್ಕೂ ಹೆಚ್ಚು ಗ್ರಾಮ ದೇವತೆಗಳ ಅದ್ದೂರಿ ಮೆರವಣಿಗೆ ನಡೆಯಿತು. ಕಬ್ಬಾಳಮ್ಮ ದೇವಿಯನ್ನು ಅಂಬಾರಿಯಲ್ಲಿ ಹೊತ್ತ ಆನೆಗಳ ಮೆರವಣಿಗೆ ವಿಶೇಷವಾಗಿತ್ತು.
    ಕರ್ನಾಟಕದ ಮೂಲೆ ಮೂಲೆಗಳಿಂದ ಬಂದಿದ್ದ ವೀರಗಾಸೆ, ಡೊಳ್ಳು ಕುಣಿತ, ಗೊರವರ ಕುಣಿತ ಮತ್ತು ಪೂಜಾ ಕುಣಿತದ ಕಲಾತಂಡಗಳು ಮೆರವಣಿಗೆಯ ಉದ್ದಕ್ಕೂ ಪ್ರದರ್ಶನ ನೀಡಿದವು.
    ಸುಮಾರು 17,000 ಶಾಲಾ ವಿದ್ಯಾರ್ಥಿಗಳು ಒಂದೇ ಸ್ಥಳದಲ್ಲಿ ಚಿತ್ರಕಲೆ ಬಿಡಿಸುವ ಮೂಲಕ ದಾಖಲೆ ನಿರ್ಮಿಸಿದರು. ಕನಕಪುರದ ಮೈದಾನದಲ್ಲಿ ಏಕಕಾಲದಲ್ಲಿ ಚಿತ್ರಕಲೆ ಬಿಡಿಸುವ ಮೂಲಕ ಅತಿ ದೊಡ್ಡ ‘ಕಲಾ ಸಂಗಮ’ಕ್ಕೆ ಸಾಕ್ಷಿಯಾದರು.
    ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ಮತ್ತು ಇತರ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.ಕನಕಪುರ ತಾಲ್ಲೂಕಿನ ಪ್ರತಿ ಪಂಚಾಯತಿ ಮಟ್ಟದಿಂದ ತಂಡಗಳನ್ನು ಆಯ್ಕೆ ಮಾಡಿ ಪಂದ್ಯಾವಳಿ ನಡೆಸಲಾಯಿತು. ವಿಜೇತ ತಂಡಗಳಿಗೆ ಲಕ್ಷಾಂತರ ರೂಪಾಯಿ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು.
    ಹಗ್ಗಜಗ್ಗಾಟ, ಕಬ್ಬಡ್ಡಿ ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಿ, ಸ್ಥಳೀಯ ಸಂಪ್ರದಾಯಗಳನ್ನು ಉಳಿಸುವ ಪ್ರಯತ್ನ ಮಾಡಲಾಯಿತು. ವಿಜೇತರಿಗೆ ಬೈಕ್ ಸೇರಿದಂತೆ ಹಲವು ಆಕರ್ಷಕ ಬಹುಮಾನಗಳನ್ನು ನೀಡಲಾಯಿತು.
    ತಾರಾ ಸಂಗಮಕ್ಕೂ ಸಾಕ್ಷಿಯಾದ ಈ ಉತ್ಸವದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಉಪೇಂದ್ರ ರಿಷಬ್ ಶೆಟ್ಟಿ ಸೇರಿದಂತೆ ಹಲವಾರು ಘಟಾನುಘಟಿ ಸಿನಿಮಾ ತಾರೆಯರು ಪಾಲ್ಗೊಂಡಿದ್ದರು ಗಾಯಕರಾದ ನವೀನ್ ಸಜ್ಜು, ಚಂದನ್ ಶೆಟ್ಟಿ ಮತ್ತು ಆಲೋಕ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮಗಳು ನಡೆದವು.
    ಈ ಉತ್ಸವದಲ್ಲಿ ಮೆಹಂದಿ ಸ್ಪರ್ಧೆ, ಕೇಶ ವಿನ್ಯಾಸ ಸ್ಪರ್ಧೆ ಮತ್ತು ಆದರ್ಶ ದಂಪತಿಗಳ ಸ್ಪರ್ಧೆಗಳಂತಹ ವಿಭಿನ್ನ ಕಾರ್ಯಕ್ರಮಗಳು ಜನರ ಗಮನ ಸೆಳೆದವು. ಪ್ರತಿದಿನ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು.
    ಉತ್ಸವಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿದಿನ ಲಕ್ಷಾಂತರ ಜನರಿಗೆ ಊಟದ ವ್ಯವಸ್ಥೆ ಮಾಡುವುದು ಈ ಕಾರ್ಯಕ್ರಮದ ಬೃಹತ್ ಸವಾಲುಗಳಲ್ಲಿ ಒಂದಾಗಿತ್ತು.ಕನಕಪುರ ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಇಡೀ ನಗರವು ಹಬ್ಬದ ವಾತಾವರಣದಲ್ಲಿತ್ತು.
    ​ಈ ಉತ್ಸವದ ಹಿಂದೆ ಕೇವಲ ಮನೋರಂಜನೆಯಷ್ಟೇ ಅಲ್ಲದೆ, ಸ್ಥಳೀಯ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಚೈತನ್ಯ ನೀಡುವುದು ಡಿ.ಕೆ. ಶಿವಕುಮಾರ್ ಅವರ ಮುಖ್ಯ ಉದ್ದೇಶವಾಗಿತ್ತು. ಕನಕಪುರವನ್ನು ಸಾಂಸ್ಕೃತಿಕ ಹಬ್ ಆಗಿ ರೂಪಿಸುವ ಪ್ರಯತ್ನ ಇದಾಗಿತ್ತು.
    ಇದರ ನಡುವೆ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗ ಅನೇಕ ಮಂದಿ ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳು ಭಾಗವಹಿಸುವ ಮೂಲಕ ಗಮನದಲ್ಲಿ ಇಡೀ ಕನಕೋತ್ಸವದ ಹೈಲೈಟ್ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಶಿವಕುಮಾರ್ ಹೆಗ್ಡೆ. ಈ ಉತ್ಸವದ ಮೂಲಕ ಶಿವಕುಮಾರ್ ಅವರು ತಮ್ಮ ಪುತ್ರಿಯನ್ನು ಕ್ಷೇತ್ರದ ಜನತೆಗೆ ಅದ್ದೂರಿಯಾಗಿ ಪರಿಚಯಿಸಿಕೊಟ್ಟರು ಈ ಮೂಲಕ ತಮ್ಮ ರಾಜಕೀಯ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗಳಿಗೆ ಉತ್ತರ ನೀಡಿದರು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಅಷ್ಟೇ ಅಲ್ಲ ಮುಂಬರುವ ದಿನಗಳಲ್ಲಿ ಐಶ್ವರ್ಯ ಶಿವಕುಮಾರ್ ಹೆಗ್ಡೆ‌ ಅವರು ರಾಜಕೀಯದಲ್ಲಿ ಸಕ್ರಿಯರಾಗುವ ಸೂಚನೆಗಳನ್ನು ನೀಡಿದರು.

    Verbattle
    Verbattle
    Verbattle
    ಕರ್ನಾಟಕ ಕಲೆ ಕಾಂಗ್ರೆಸ್ ಕ್ರೀಡೆ ಚಂದನ್ ಬೆಂಗಳೂರು ಬೈಕ್ ಮೈ ರಾಜಕೀಯ ವಿದ್ಯಾ ವಿದ್ಯಾರ್ಥಿ ವ್ಯಾಪಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!
    Next Article ಮೈಲಾರ ಕಾರ್ಣಿಕ ಭವಿಷ್ಯದ ಅರ್ಥ ಗೊತ್ತಾ..?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 9:08 ಫೂರ್ವಾಹ್ನ

      mgm on line https://betmgm-play.com/ online casino mgm

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Glennhof ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Unjwvq ರಲ್ಲಿ ಕ್ರಿಶ್ಚಿಯನ್‌ ಅಭಿವೃದ್ಧಿ ಮಂಡಳಿಗೆ ಕೆ.ಜೆ.ಜಾರ್ಜ್ ಸಾರಥ್ಯ | KJ George
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.