ಶಿವಕುಮಾರ್ ವಿರುದ್ಧ ದ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸಿದ ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಇವರ ವಿರುದ್ದ ಪ್ರಕರಣ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದ ಚಾರ್ಜ್ಶೀಟ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ರಾಮನಗರದ ವಿವಿಧ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ ಮಾಡಿದ್ದ ಹಿನ್ನೆಲೆ FIR ಹಾಕಲಾಗಿತ್ತು. ಈ ಪ್ರಕರಣ ರದ್ದು ಪಡಿಸುವಂತೆ ಕೋರಿ ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ.