ಬೆಂಗಳೂರು, ಜೂ.16- ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬೆದರಿಕೆ ಹಾಕಲಾಗಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಜನರನ್ನು ಗುಂಪು ಗೂಡಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ವಿರುದ್ಧ ದೂರು ದಾಖಲಿಸುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ನಿಧಾನವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಇಂತಹ ಸಂದರ್ಭದಲ್ಲೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪ್ರತಿಭಟನೆ ನಡೆಸುವ ಔಚಿತ್ಯವಾದರೂ ಏನು ಎಂದು ಅವರು ಪ್ರಶ್ನಿಸಿದರು.
ಒಂದು ವೇಳೆ ಕೋವಿಡ್ ಸಂಖ್ಯೆ ಹೆಚ್ಚಳವಾದರೆ ಅದಕ್ಕೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತದೆ. ಇದರ ನೈತಿಕತೆಯನ್ನು ಅವರೇ ಹೊರಬೇಕು. ಪ್ರತಿಭಟನೆ ಮಾಡುವುದಿದ್ದರೆ ಸ್ವತಂತ್ರ ಉದ್ಯಾನವನದಲ್ಲಿ ಮಾಡಲಿ. ಅದನ್ನು ಬಿಟ್ಟು ಜನರನ್ನು ಗುಂಪುಗೂಡಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದು ಶೋಭೆ ತರುವುದಿಲ್ಲ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲಾಗುವುದು. ಈ ಹಿಂದೆಯೂ ಮೇಕೆದಾಟು ಯೋಜನೆ ವಿಷಯದಲ್ಲೂ ಇದೇ ರೀತಿ ಕಾನೂನು ಉಲ್ಲಂಘನೆ ಮಾಡಿದ್ದರು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
Previous Articleಅನೈತಿಕ ಸಂಬಂಧದ ಶಂಕೆ… ಪತ್ನಿ ಕೊಚ್ಚಿ ಕೊಂದ ಪತಿ
Next Article ಸ್ಪೂಕಿ ಕಾಲೇಜ್- ಟೀಸರ್