Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs peddler ಗಳ ಜೊತೆ ಇದ್ದ ಪೊಲೀಸರು.
    Trending

    Drugs peddler ಗಳ ಜೊತೆ ಇದ್ದ ಪೊಲೀಸರು.

    vartha chakraBy vartha chakraಸೆಪ್ಟೆಂಬರ್ 15, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.13- ಡ್ರಗ್ ಪೆಡ್ಲರ್ಸ್ ಗಳ ಜೊತೆ ನೇರ ನಂಟು ಹೊಂದಿದ್ದ ಇನ್ಸ್ ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11ಮಂದಿ‌ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
    ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ
    ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಟಿ ಮಂಜಣ್ಣ ಅವರನ್ನು ಡಿಸಿಪಿ ಗಿರೀಶ್ ಅವರು ನೀಡಿದ ವರದಿಯನ್ನು ಆಧರಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
    ಇದರ ಜೊತೆಗೆ ಚಾಮರಾಜಪೇಟೆ ಠಾಣೆಯ ಹೆಡ್ ಕಾನ್ ಸ್ಟೇಬಲ್ ಗಳಾದ ರಮೇಶ್ ಶಿವರಾಜ್ ಕಾನ್ಸ್ ಟೇಬಲ್ ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ, ಆನಂದ್ ನನ್ನು ಅಮಾನತು ಮಾಡಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ.
    ಇನ್ನು ಜಗಜೀವನರಾಮನಗರದ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಎ ಎಸ್ ಐ) ಕುಮಾರ್ ಹೆಡ್ ಕಾನ್ ಸ್ಟೇಬಲ್ ಆನಂದ್ ಸಿಬ್ಬಂದಿಗಳಾದ ಬಸವನಗೌಡ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
    ಕಳೆದ ಆಗಸ್ಟ್ 22ರಂದು ಮಾದಕವಸ್ತು ಸರಬರಾಜು ಮಾರಾಟ ಮಾಡುತ್ತಿದ್ದ ಆರು ಮಂದಿ ಡ್ರಗ್ ಪೆಡ್ಲರ್ಸ್ ಗಳನ್ನುರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿತ್ತು.
    ನಿರಂತರ ಸಂಪರ್ಕ:
    ಬಂಧಿತ ಸಲ್ಮಾನ್, ನಯಾಜ್ ಉಲ್ಲಾ ,ನಯಾಜ್ ಖಾನ್ ಸೇರಿ ಆರು ಮಂದಿ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಬರುವ ಟೈಡಲ್-100 ಮಾತ್ರೆಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾಗಿತ್ತು.
    ಆರೋಪಿಗಳ ಬಳಿ 1000 ಟೈಡಲ್-100 ಮಾತ್ರೆಗಳನ್ನು ವಶಪಡಿಸಿಕೊಂಡು ಆರೋಪಿಗಳ ಮೊಬೈಲ್ ಪರಿಶೀಲನೆಯ ವೇಳೆ ಅಧಿಕಾರಿಗಳಿಗೆ ಆರೋಪಿಗಳು ಪೊಲೀಸರ ಜೊತೆಗೆ ನಿರಂತರ ಸಂಪರ್ಕದಲ್ಲಿರುವುದು ಹಣಕಾಸಿಗೆ ಸಂಬಂಧಿಸಿದ ಮೆಸೇಜ್ ಮಾಡಿರುವುದು ಜೊತೆಗೆ ಆಡಿಯೋಗಳು ಪತ್ತೆಯಾಗಿದ್ದವು.
    ಡ್ರಗ್ ಪೆಡ್ಲರ್ ಜೊತೆ ಪಾರ್ಟಿ:
    ಅಲ್ಲದೇ ಆರೋಪಿಗಳ ಜೊತೆಗೆ ಪೊಲೀಸರು ಪಾರ್ಟಿ ಮಾಡಿದ ಫೋಟೋಗಳು ಪತ್ತೆಯಾಗಿದ್ದವು,ಈ ಸಂಬಂಧ ತನಿಖೆಗಾಗಿ ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ತಂಡವನ್ನು ಡಿಸಿಪಿ ಗಿರೀಶ್ ರಚಿಸಿದ್ದರು.
    ಎಸಿಪಿ ಭರತ್ ರೆಡ್ಡಿ ಅವರು ನಡೆಸಿದ ತನಿಖೆಯಲ್ಲಿ ಡ್ರಗ್ ಪೆಡ್ಲರ್ಸ್ ಗಳ ಜೊತೆ ನಂಟು ಹೊಂದಿದ್ದ ಪೊಲೀಸರು ಮಾಮೂಲಿ ಪಡೆಯುತ್ತಿದ್ದ ಸಂಗತಿ ತನಿಖೆಯಲ್ಲಿ ಬಯಲಾಗಿತ್ತು.
    ಕಡಿಮೆ ಬೆಲೆಗೆ ಟೈಡಲ್ ಮಾತ್ರೆ ಖರೀದಿಸಿ 300 400 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕಡಿಮೆ ಬೆಲೆಗೆ ಖರೀದಿಸಿ ಪೊಲೀಸರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದರು. ಪ್ರತಿ ತಿಂಗಳು ಇನ್ಸ್ ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳಿಗೆ ಹಣ ನೀಡುತ್ತಿದ್ದರು.
    ಸಂಬಂಧಿಕರಿಗೂ ಹಣ:
    ಡ್ರಗ್ ಪೆಡ್ಲರ್ಸ್ ಗಳಿಂದ ಪೊಲೀಸರು ತಮ್ಮ ಸಂಬಂಧಿಕರ ಖಾತೆಗೂ ಕೂಡ ಹಣ ಹಾಕಿಸಿಕೊಂಡಿರುವ ವಿವರಗಳು ಪತ್ತೆಯಾಗಿ ಪೊಲೀಸರು ದಂಧೆಯಲ್ಲಿ ಭಾಗಿಯ ಸಂಬಂಧ ವಿಸ್ತೃತ ತನಿಖೆಯನ್ನು ಕೈಗೊಂಡ ಎಸಿಪಿ ಭರತ್ ರೆಡ್ಡಿ ಅವರು ಡಿಸಿಪಿ ಗಿರೀಶ್ ಗೆ ವಿವರವಾದ ವರದಿಯನ್ನು ಲಿಖಿತ ರೂಪದಲ್ಲಿ ನೀಡಿದರು.
    ವರದಿಯನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿ ಪರಿಶೀಲನೆ ನಡೆಸಿದ ಗಿರೀಶ್ 10 ಮಂದಿಯನ್ನು ಸಸ್ಪೆಂಡ್ ಮಾಡಿ‌ ಆದೇಶ ಹೊರಡಿಸಿದ್ದಾರೆ.

    Bangalore crime drugs ED g Government Karnataka News Peddler Trending Varthachakra ಅಪರಾಧ ಸುದ್ದಿ ಕಾಲೇಜು ನ್ಯಾಯ ಬೆಂಗಳೂರು ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಜಗ್ಗಿ ವಾಸುದೇವ್ ಹೆಸರಲ್ಲಿ ಮೋಸದ ಬಲೆ.
    Next Article ದೇಶದಲ್ಲೇ ಮೊದಲು ಬೆಂಗಳೂರಿನ ಈ ವ್ಯವಸ್ಥೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmaceutical online ordering ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • FobertCaR ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • EdwinSig ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe