ಬೆಂಗಳೂರು,ಅ.25-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ.
ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ ದಾಖಲೆಗಳೊಂದಿಗೆ ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಬರುವಂತೆ ಈ ಅಧಿಕಾರಿಗಳಿಗೆ ನೀಡಿರುವ ಸಮನ್ಸ್ ನಲ್ಲಿ ತಿಳಿಸಲಾಗಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿದ್ದರು
ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಇದೀಗ ಅದರ ಆಧಾರದಲ್ಲಿ ಅಧಿಕಾರಿಗಳನ್ನು ವಿಚಾರಣೆಗೆ ಬರುವಂತೆ ಸೂಚಿಸಿರುವುದರೊಂದಿಗೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ
Previous Articleತಲ್ವಾರ್ ಗಳಿಂದ ಹೊಡೆದಾಡಿದ ಯುವಕರು.
Next Article ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.


1 ಟಿಪ್ಪಣಿ
Erlebe Luxus-Gaming bei Betano https://betanogame.org/de/. Neue Spieler erhalten einen großzügigen 100% Willkommensbonus bis zu €500 plus Freispiele. Drehe die Walzen der neuesten Slots oder setze dich an Live-Casino-Tische mit echten Dealern. Betano macht jeden Moment unvergesslich.