ಅಹಮದಾಬಾದ್:
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾಣಿ ಸೇರಿದಂತೆ 242 ಮಂದಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯ ವಿಮಾನ ಅಪಘಾತಕ್ಕೀಡಾಗಿದೆ
ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು.
ಏರ್ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್‌ಆಫ್ ಆಗಿತ್ತು.ಈ ವಿಮಾನವು ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿತ್ತು.
ಬೋಯಿಂಗ್ ಕಂಪನಿಗೆ ಸೇರಿದ 787 ಡ್ರೀಮ್‌ಲೈನರ್ ವಿಮಾನ ಇದಾಗಿದ್ದು, ಒಟ್ಟು 300 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಇದರದ್ದು.
ಈ ದುರಂತಕ್ಕೆ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ,ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆಯಾಗಿದೆ ಎಂದು ಹೇಳಿದ್ದಾರೆ
Previous Articleಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.
Next Article ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

1 Comment
DГ©couvrez notre pharmacie : un espace dГ©diГ© Г votre forme et vitalitГ© – https://santeenfrance.fr/pages/testcovidpharmacie/page:143 , Votre pharmacie de confiance pour des solutions sur mesure .